ಕನ್ನಡ ವಿವಿ ವಿದ್ಯುತ್ ಬಿಲ್ ಮನ್ನಾ ಮಾಡಲು ಮನವಿ

Update: 2023-09-06 07:47 GMT

ಬೆಂಗಳೂರು: ಕನ್ನಡ ವಿಶ್ವವಿದ್ಯಾನಿಲಯಕ್ಕೆ ಯಾವುದೇ ಹಣಕಾಸಿನ ಮೂಲಗಳು ಇಲ್ಲ. ಈ ವಿದ್ಯಾಲಯವು ಸಂಶೋಧನಾ ಕೇಂದ್ರವಾಗಿರುವ ಕಾರಣ ಸರಕಾರದಿಂದ ಅನುದಾನ ಬಿಡುಗಡೆ ಆಗದೆ ದೈನಂದಿನ ಖರ್ಚುವೆಚ್ಚಗಳನ್ನು ನಿಭಾಯಿಸುವುದು ದುಸ್ತರವಾಗಿದೆ ಎಂದು ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆ ಅಧ್ಯಕ್ಷ ಸಮೀಉಲ್ಲಾ ಖಾನ್ ತಿಳಿಸಿದ್ದಾರೆ.

ಈ ಸಂಬಂಧ ಮಂಗಳವಾರ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ವಿವಿಯ ವಿದ್ಯುತ್ ಬಿಲ್ 82.10 ಲಕ್ಷ ರೂ.ಗಳನ್ನು ಮನ್ನಾ ಮಾಡುವಂತೆ ಉಪ ಕುಲಪತಿಯವರು ಈಗಾಗಲೆ ತಮ್ಮಲ್ಲಿ ಹಾಗೂ ಮುಖ್ಯಮಂತ್ರಿಗೆ ಕೋರಿಕೊಂಡಿದ್ದಾರೆ ಎಂದು ಹೇಳಿದರು.

ದಯಮಾಡಿ ಕನ್ನಡಿಗರ ಅಸ್ಮಿತೆಯಾಗಿರುವ ಕನ್ನಡ ವಿಶ್ವವಿದ್ಯಾನಿಲಯದ ವಿದ್ಯುತ್ ಬಿಲ್ ಅನ್ನು ಮನ್ನಾ ಮಾಡಬೇಕೆಂದು ಕೃತಜ್ಞತಾಪೂರ್ವಕವಾಗಿ ಅಖಿಲ ಕರ್ನಾಟಕ ಮಹಮ್ಮದೀಯರ ಕನ್ನಡ ವೇದಿಕೆಯು ವಿನಂತಿಸುತ್ತದೆ ಎಂದು ಸಮೀಉಲ್ಲಾ ಖಾನ್ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News