ಕರ್ನಾಟಕ ಬಂದ್‌ | 40ಕ್ಕೂ ಅಧಿಕ ವಿಮಾನಗಳ ಹಾರಾಟ ರದ್ದು

Update: 2023-09-29 10:34 GMT

ಚಿತ್ರ-  ಪಿಟಿಐ 

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದ್ದು, ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಪ್ರತಿಭಟನೆಯ ಬಿಸಿ ತಟ್ಟಿದೆ.

ಬಂದ್‌ ಹಿನ್ನೆಲೆಯಲ್ಲಿ ಸುಮಾರು 40ಕ್ಕೂ ಅಧಿಕ ವಿಮಾನಗಳ ಸಂಚಾರ ರದ್ದಾಗಿದೆ.

ʼʼಇಂದು 22 ಆಗಮನ ಮತ್ತು 22 ನಿರ್ಗಮನ ಸೇರಿದಂತೆ 44 ವಿಮಾನಗಳನ್ನು ರದ್ದುಗೊಳಿಸಲಾಗಿದೆʼʼ ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ರಾಜ್ಯದೆಲ್ಲೆಡೆ ವಿವಿಧ ಸಂಘಟನೆಗಳಿಂದ ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್​ಗೆ ಚಿತ್ರರಂಗ ಕೂಡ ಬೆಂಬಲ ನೀಡಿದೆ. ಬೆಂಗಳೂರು ನಗರ, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೆ, ದಕ್ಷಿಣ ಕನ್ನಡ, ಉಡುಪಿ‌ ಸೇರಿ ಕೆಲವು ಜಿಲ್ಲೆಗಳಲ್ಲಿ ಕರ್ನಾಟಕ ಬಂದ್‌ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News