ವಸತಿ ಶಾಲೆ/ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬ, ಜಯಂತಿ ಆಚರಣೆಗೆ ಸಂಬಂಧಪಟ್ಟ ಸುತ್ತೋಲೆ ವಾಪಸ್

Update: 2024-02-15 15:09 GMT

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(ಕ್ರೈಸ್ಟ್) ಅಡಿಯಲ್ಲಿನ ವಸತಿ ಶಾಲೆ/ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸುವ ಬಗ್ಗೆ ಹೊರಡಿಸಲಾಗಿರುವ ಸುತ್ತೋಲೆಯನ್ನು ಹಿಂಪಡೆಯಲಾಗಿದೆ ಎಂದು ಸಂಘ(ಕ್ರೈಸ್ಟ್)ದ ಕಾರ್ಯ ನಿರ್ವಾಹಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಈ ಹಿಂದೆ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡಬಾರದು. ‘ನಿಗದಿತ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಆಚರಿಸಬಹುದು. ಅದನ್ನು ಹೊರತುಪಡಿಸಿ ಧಾರ್ಮಿಕ ಹಬ್ಬಗಳನ್ನು ಆಚರಿಸಬಾರದು’ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿತ್ತು.

ಯುಗಾದಿ, ರಮಾಝಾನ್, ಕ್ರಿಸ್ಮಸ್, ಈದ್ ಮಿಲಾದ್, ಸಂಕ್ರಾತಿ ಸೇರಿ ಯಾವುದೇ ಧಾರ್ಮಿಕ ಹಬ್ಬಗಳನ್ನು ಶಾಲೆ-ಕಾಲೇಜುಗಳಲ್ಲಿ ಆಚರಿಸುವಂತಿಲ್ಲ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿತ್ತು. 10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಶಾಲೆ-ಕಾಲೇಜುಗಳಲ್ಲಿ ಆಚರಿಸಬಹುದು. ಧಾರ್ಮಿಕ ಹಬ್ಬ ಆಚರಿಸಿದರೆ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಲಾಗಿತ್ತು. ಆದರೆ, ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುತ್ತೋಲೆ ಹಿಂಪಡೆಯಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News