ತಮಿಳುನಾಡಿಗೆ ಪ್ರತಿದಿನ 2,600 ಕ್ಯುಸೆಕ್ ನೀರು ಹರಿಸಲು ಮತ್ತೆ ಕರ್ನಾಟಕಕ್ಕೆ ಸೂಚನೆ

Update: 2023-10-30 11:51 GMT

KRS | Photo: PTI

ಹೊಸದಿಲ್ಲಿ: ತಮಿಳುನಾಡಿಗೆ ನವೆಂಬರ್ 1 ರಿಂದ 15 ರವರೆಗೆ ಪ್ರತಿದಿನ 2600 ಕ್ಯುಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.

ಅಕ್ಟೋಬರ್ ಅಂತ್ಯದವರೆಗೆ ಪ್ರತಿದಿನ 3 ಸಾವಿರ ಕ್ಯುಸೆಕ್​ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಕಳೆದ ಬಾರಿ ಸಭೆಯಲ್ಲಿ ಆದೇಶಿಸಿತ್ತು. ಆದೇಶದ ಅವಧಿ ಮುಕ್ತಾಯವಾಗುತ್ತಿರುವ ಬೆನ್ನಲ್ಲೇ ಸೋಮವಾರ  ಕಾವೇರಿ ನೀರು ನಿಯಂತ್ರಣ ಸಮಿತಿಯು ಸಭೆ ನಡೆಸಿ ಕರ್ನಾಟಕದಿಂದ ನೀರು ಹರಿಸಲು ಸೂಚನೆ ನೀಡಿದೆ.

ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸುಪ್ರೀಂ ಕೋರ್ಟ್‌ ಆದೇಶದಂತೆ ರಚಿಸಲಾದ ಕಾವೇರಿ ನೀರು ನಿಯಂತ್ರಣಾ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಪ್ರತಿ 15 ದಿನಗಳಿಗೊಮ್ಮೆ ಸಭೆಯನ್ನು ನಡೆಸಿ ನೀರು ಬಿಡುವ ವಿಚಾರಕ್ಕೆ ಕರ್ನಾಟಕಕ್ಕೆ ಆದೇಶ ನೀಡಲಾಗುತ್ತಿದೆ. 

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News