ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು

Update: 2024-06-18 13:22 GMT

ಬೆಂಗಳೂರು : ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿಗೆ (ವಿಚಾರಣಾಧೀನ ಕೈದಿಗೆ) ಸಂತ್ರಸ್ತೆಯನ್ನೇ ಮದುವೆಯಾಗಲು ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್‌ ಅಪರೂಪದ ಆದೇಶ ಹೊರಡಿಸಿದೆ.

ಆರೋಪಿಯ ಲೈಂಗಿಕ ಸಂಪರ್ಕದಿಂದ ಸಂತ್ರಸ್ತೆಗೆ ಮಗು ಜನಿಸಿದೆ. ಸಂತ್ರಸ್ತೆಗೆ ಸದ್ಯ 18 ವರ್ಷ. ಈ ಹಿಂದೆ ಏನೆಲ್ಲಾ ಘಟನೆಗಳು ನಡೆದಿವೆ ಎನ್ನುವುದು ಮಗುವಿಗೆ ತಿಳಿದಿಲ್ಲ. ಮಗು ಮತ್ತು ಸಂತ್ರಸ್ತೆಯ ಹಿತ ರಕ್ಷಿಸಬೇಕಿದೆ. ಮಗು ಭವಿಷ್ಯದಲ್ಲಿ ಯಾವುದೇ ರೀತಿಯಲ್ಲಿ ಅವಮಾನಕ್ಕೆ ಗುರಿಯಾಗಬಾರದು ಎಂದು ಹೈಕೋರ್ಟ್‌ ಮೇಲಿನ ಆದೇಶ ಹೊರಡಿಸಿದೆ.

ಪೋಕ್ಸೋ ಕಾಯ್ದೆಯಡಿ ತನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣ ರದ್ದುಪಡಿಸಲು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಸಂತ್ರಸ್ತೆಯನ್ನು ಮದುವೆಯಾಗಲು ಜೂ.17ರಿಂದ ಅನ್ವಯವಾಗುವಂತೆ ಜು.3ರವರೆಗೆ ಆರೋಪಿಯನ್ನು ಮಧ್ಯಂತರ ಜಾಮೀನು ಮೇಲೆ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ.

ಸಂತ್ರಸ್ತೆಯನ್ನು ಮದುವೆಯಾಗಿ ಜು.3ರ ಸಂಜೆ ಹಿಂದಿರುಗಬೇಕು. ಜು.4ರಂದು ವಿವಾಹ ನೋಂದಣಿ ಪತ್ರವನ್ನು ಕೋರ್ಟ್‌ಗೆ ಸಲ್ಲಿಸಬೇಕು. ಜಾಮೀನು ಮೇಲೆ ಹೊರಗಿರುವ ಸಮಯದಲ್ಲಿ ಆರೋಪಿ ಸಂಬಂಧಪಟ್ಟ ಪೊಲೀಸ್‌ ಠಾಣೆಗೆ ವಾರಕ್ಕೊಮ್ಮೆ ಹಾಜರಾಗಬೇಕು. ಒಂದು ವೇಳೆ ಮಧ್ಯಂತರ ಜಾಮೀನು ಮಂಜೂರಾತಿಯ ಉದ್ದೇಶ ಉಲ್ಲಂಘಿಸಿದರೆ, ಗಂಭೀರವಾಗಿ ತೆಗೆದುಕೊಳ್ಳಲಾಗುವುದು ಎಂದು ನಿರ್ದೇಶಿಸಿರುವ ನ್ಯಾಯಪೀಠ, ವಿಚಾರಣೆಯನ್ನು ಜು.4ಕ್ಕೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News