ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಜೆ.ಪಿ.ನಡ್ಡಾ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ತಡೆ

Update: 2023-07-08 13:50 GMT

ಬೆಂಗಳೂರು, ಜು.8: ವಿಧಾನಸಭೆ ಚುನಾವಣೆ ವೇಳೆ ವಿಜಯನಗರ ಹರಪ್ಪನಹಳ್ಳಿ ಪಟ್ಟಣದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರದ ವೇಳೆ ಮತದಾರರಿಗೆ ಆಮಿಷ ಒಡ್ಡುವ ರೀತಿಯಲ್ಲಿ ಭಾಷಣ ಮಾಡಿದ್ದ ಆರೋಪ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿ ಆದೇಶಿಸಿದೆ.

ತಮ್ಮ ವಿರುದ್ಧ ಹರಪ್ಪನಹಳ್ಳಿ ಠಾಣಾ ಪೊಲೀಸರು ದಾಖಲಿಸಿರುವ ಪ್ರಕರಣ ಹಾಗೂ ಅದರ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ಜೆ.ಪಿ.ನಡ್ಡಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಮುಂದೂಡಿದೆ.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 2023ರ ಮೇ 7ರಂದು ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದ ಐ.ಬಿ.ವೃತ್ತದಲ್ಲಿ ಬಿಜೆಪಿ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಜೆ.ಪಿ.ನಡ್ಡಾ ಮಾತನಾಡಿ, ಡಬಲ್ ಇಂಜಿನ್ ಸರಕಾರ ಬಂದರೆ ಕೇಂದ್ರದ ಯೋಜನೆಗಳೆಲ್ಲ ರಾಜ್ಯದಲ್ಲಿ ಮಂದುವರಿಯುತ್ತವೆ.

ಚುನಾವಣೆಯಲ್ಲಿ ಬಿಜೆಪಿ ಸೋತರೆ ಕೇಂದ್ರ ಸರಕಾರದಿಂದ ಸಿಗುವ ಯೋಜನೆಗಳಿಂದ ಮತದಾರರು ವಂಚಿತರಾಗಲಿದ್ದೀರಿ. ತಮಗೆ ಅಭಿವೃದ್ಧಿ ಬೇಕಾದರೆ ಬಿಜೆಪಿ ಗೆಲ್ಲಿಸಬೇಕು ಎಂದು ಹೇಳಿಕೆ ನೀಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News