ವಯನಾಡ್ ಭೂಕುಸಿತ: ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ

Update: 2024-08-03 07:39 GMT

ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು: ವಯನಾಡ್ ಭೂಕುಸಿತ ದುರಂತದ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, “ವಯನಾಡ್ ಭೂಕುಸಿತದ ದುರಂತದ ಸಂದರ್ಭದಲ್ಲಿ ಕರ್ನಾಟಕವು ಕೇರಳದ ಬೆನ್ನಿಗೆ ನಿಲ್ಲಲಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೆರವಿನ ಭರವಸೆ ನೀಡಿರುವ ನಾನು, ಭೂಕುಸಿತದ ಸಂತ್ರಸ್ತರಿಗೆ ಕರ್ನಾಟಕ ಸರಕಾರವು 100 ಮನೆಗಳನ್ನು ನಿರ್ಮಿಸಿ ಕೊಡಲಿದೆ. ನಾವು ಒಟ್ಟಾಗಿ ಸಂತ್ರಸ್ತರ ಬದುಕಿನಲ್ಲಿ ಮತ್ತೊಮ್ಮೆ ಭರವಸೆಯ ಆಶಾಕಿರಣವನ್ನು ಮೂಡಿಸೋಣ” ಎಂದು ಬರೆದುಕೊಂಡಿದ್ದಾರೆ.

ವಯನಾಡ್ ಭೂ ಕುಸಿತದಲ್ಲಿ ಇಲ್ಲಿಯವರೆಗೆ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News