ವಿಧಾನಮಂಡಲ ಅಧಿವೇಶನ ಜು.21ರವರೆಗೆ ವಿಸ್ತರಣೆ, ಜು.7ಕ್ಕೆ ಬಜೆಟ್ ಮಂಡನೆ: ಸ್ಪೀಕರ್ ಯು.ಟಿ.ಖಾದರ್

Update: 2023-07-04 13:48 GMT

ಬೆಂಗಳೂರು,ಜು.4: ವಿಧಾನ ಮಂಡಲದ ಅಧಿವೇಶನವು 21ನೇ ಜುಲೈ 2023ರವರೆಗೆ ಮುಂದುವರಿಸಲಾಗುವುದು ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ. 

ಇಂದು ವಿಧಾನಸಭೆಯ ಕಲಾಪದ ಮಧ್ಯೆ ಈ ಬಗ್ಗೆ ಮಾಹಿತಿ ನೀಡಿದ ಸಭಾಧ್ಯಕ್ಷರು,  'ಜುಲೈ 5 ರಂದು ಈಗಾಗಲೆ ಸ್ವೀಕರಿಸಿದ ವಿಧೇಯಕಗಳ ಮಂಡನೆ ಮಂಡಿಸುವುದು, ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಚರ್ಚೆ, ಜುಲೈ 6ರಂದು ಬೆಳಗ್ಗೆ ಮುಖ್ಯಮಂತ್ರಿಗಳು ರಾಜ್ಯಪಾಲರ ವಂದನಾ ನಿರ್ಣಯದ ಚರ್ಚೆಗೆ ಉತ್ತರ ನೀಡಲಿದ್ದಾರೆ' ಎಂದರು. 

'ಜುಲೈ 7ರಂದು ಮುಖ್ಯಮಂತ್ರಿಗಳು 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಜುಲೈ 10ರಿಂದ 19ರವೆಗೆ ಇಲಾಖಾವಾರು ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು. ಜುಲೈ 20ರಂದು ಹಣಕಾಸು ವಿಧೇಯಕಗಳ ಅಂಗೀಕಾರವಿರಲಿದೆ' ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News