ಕಾಂಗ್ರೆಸ್ ಪಕ್ಷದಿಂದ ಕವಿತಾ ರೆಡ್ಡಿ ಅಮಾನತು
Update: 2024-09-18 12:37 GMT
ಬೆಂಗಳೂರು : ಕಾಂಗ್ರೆಸ್ ಪಕ್ಷದಿಂದ ಕವಿತಾ ರೆಡ್ಡಿ ಅವರನ್ನು ಅಮಾನತುಗೊಳಿಸಿ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಆದೇಶ ಹೊರಡಿಸಿದೆ.
ಕೆಲ ದಿನಗಳ ಹಿಂದೆ ಕೆಪಿಸಿಸಿ ಮಹಿಳಾ ಘಟಕಕ್ಕೆ ಸೌಮ್ಯಾರೆಡ್ಡಿ ನೇಮಕ ಹಾಗೂ ಸಚಿವರ ಮಕ್ಕಳಿಗೆ ಲೋಕಸಭೆ ಟಿಕೆಟ್ ಸೇರಿದಂತೆ, ಪಕ್ಷದ ಕೆಲ ಆಂತರಿಕ ವಿಚಾರಗಳ ಬಗ್ಗೆ ಕವಿತಾ ರೆಡ್ಡಿ ತಮ್ಮ ಅಸಮಾಧಾನ ಹೊರಹಾಕಿದ್ದರು. ಇದರ ಬೆನ್ನಲ್ಲೇ ಕವಿತಾ ರೆಡ್ಡಿ ಅವರಿಗೆ ರಾಜ್ಯ ಕಾಂಗ್ರೆಸ್ ನೋಟಿಸು ನೀಡಿತ್ತು.
ಕವಿತಾ ರಡ್ಡಿ ಅವರನ್ನು ಅಮಾನತುಗೊಳಿಸಲಾಗಿದ್ದು, ಅವರು ಪಕ್ಷದಲ್ಲಿ ಹೊಂದಿರುವ ಎಲ್ಲಾ ಹುದ್ದೆಗಳನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಪತ್ರದಲ್ಲಿ ಆದೇಶದಲ್ಲಿ ತಿಳಿಸಿದ್ದಾರೆ.