ಕೆಇಎ | ನಿಗಮ-ಮಂಡಳಿ ನೇಮಕಾತಿ ಪೂರ್ಣ : 684 ಹುದ್ದೆವಾರು ಅಂತಿಮ ಅಂಕ ಪಟ್ಟಿ ಪ್ರಕಟ

Update: 2024-06-21 12:23 GMT

ಬೆಂಗಳೂರು : ವಿವಿಧ ನಿಗಮ, ಮಂಡಳಿಗಳ 684 ಹುದ್ದೆಗಳನ್ನು ತುಂಬಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(ಕೆಇಎ) ವತಿಯಿಂದ 2023ರ ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ನಡೆಸಲಾಗಿದ್ದ ಪರೀಕ್ಷೆಗಳ ಅಂತಿಮ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ. ಸ್ವೀಕೃತ ಆಕ್ಷೇಪಗಳ ಪರಿಶೀಲನೆ ನಂತರ ಈ ಅಂತಿಮ ಅಂಕಪಟ್ಟಿ ಪ್ರಕಟಿಸಲಾಗಿದೆ.

ಒಟ್ಟು 6,18,148 ಅಭ್ಯರ್ಥಿಗಳ ಅಂತಿಮ ಅಂಕ ಪಟ್ಟಿಯನ್ನು ಸಂಬಂಧಪಟ್ಟ ಇಲಾಖೆ/ಸಂಸ್ಥೆಗಳಿಗೆ ಪ್ರಾಧಿಕಾರದಿಂದ ಹಸ್ತಾಂತರಿಸಲಾಗುವುದು. ತದನಂತರ ಸಂಬಂಧಪಟ್ಟ ಇಲಾಖೆ/ಸಂಸ್ಥೆಗಳು ನಿಯಮಾನುಸಾರ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಮುಂದಿನ ಕ್ರಮವಹಿಸುತ್ತವೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386 ಹುದ್ದೆ), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್‍ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು ಎಂದು ಕೆಇಎ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News