ಕೆಇಎ | ನಿಗಮ-ಮಂಡಳಿ ನೇಮಕಾತಿ : 684 ಹುದ್ದೆವಾರು ಪರಿಷ್ಕೃತ ಅಂಕ ಪಟ್ಟಿ ಪ್ರಕಟ

Update: 2024-06-07 14:38 GMT

ಬೆಂಗಳೂರು: ಕಿಯೋನಿಕ್ಸ್, ಎಂಎಸ್‍ಐಎಲ್ ಸೇರಿದಂತೆ ಐದು ನಿಗಮ- ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಬಿಡುಗಡೆ ಮಾಡಿದೆ.

ಎ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ(386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ(186), ಎಂಎಸ್‍ಐಎಲ್(72), ಕಿಯೋನಿಕ್ಸ್(26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ(14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು.

ಈ ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜೂ.14ರೊಳಗೆ ಇ-ಮೇಲ್ kea2023exam@gmail.com ಮೂಲಕ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News