ಕೆಇಎ ಪರೀಕ್ಷೆ: ಹಿಜಾಬ್ ಧರಿಸಿ ಹಾಜರಾಗಲು ಷರತ್ತುಬದ್ಧ ಅನುಮತಿ

Update: 2023-10-26 16:01 GMT

ಬೆಂಗಳೂರು, ಅ.26: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(ಕೆಇಎ) ಅ.28 ಮತ್ತು ಅ.29ರಂದು ನಡೆಯಲಿರುವ ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಷರತ್ತುಬದ್ಧ ಅನುಮತಿ ನೀಡಿದ್ದು, ಇದಕ್ಕೆ ಕೆಲವು ಷರತ್ತುಗಳನ್ನು ವಿಧಿಸಿದೆ.

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಕೊಠಡಿಗೆ ಪ್ರವೇಶ ಕಲ್ಪಸಲು ಸೂಚಿಸಿದ್ದರೂ, ಪರೀಕ್ಷೆ ಆರಂಭವಾಗುವುದಕ್ಕೆ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಅವರು ಹಾಜರಿರಬೇಕು. ಅವರು ಮಹಿಳಾ ಸಿಬ್ಬಂದಿಯಿಂದ ತಪಾಸಣೆಗೆ ಒಳಪಡಬೇಕು. ತಪಾಸಣೆಗೆ ಸೂಚಿಸಿರುವ ಸಮಯ ಮೀರಿದ ನಂತರ ಆಗಮಿಸಿದರೆ ಅವರು ಹಿಜಾಬ್ ಧರಿಸಿ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಪರೀಕ್ಷೆಗೆ ಹಾಜರಾಗುವವರು ಪ್ರವೇಶ ಪತ್ರ, ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ 2 ಫೋಟೋ, ಸರಕಾರ ಮಾನ್ಯ ಮಾಡಿರುವ ಗುರುತಿನ ಚೀಟಿ ತರಬೇಕು. ಪರೀಕ್ಷೆ ಮುಗಿಯುವವರೆಗೂ ಹೊರ ಹೋಗಲು ಅವಕಾಶವಿಲ್ಲ. ಈ ಎಲ್ಲಾ ನಿಯಮಗಳು ಹಿಂದಿನಿಂದಲೂ ಇವೆ. ಅದನ್ನೇ ಯಥಾವತ್ತಾಗಿ ಮುಂದುವರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News