"ಮನಮೋಹನ್ ಸಿಂಗ್ ರಿಗೆ ಉದ್ದೇಶಪೂರ್ವಕ ಮಾಡುತ್ತಿರುವ ಅವಮಾನ": ಸ್ಮಾರಕಕ್ಕೆ ಇನ್ನೂ ಸ್ಥಳ ಗುರುತಿಸದ್ದಕ್ಕೆ ಕಾಂಗ್ರೆಸ್ ಆಕ್ರೋಶ
ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಮಾರಕವನ್ನು ನಿರ್ಮಾಣ ಮಾಡಲು ಸಾಧ್ಯವಿರುವ ಸ್ಥಳದಲ್ಲಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ಆದರೆ ಖರ್ಗೆ ಅವರ ಮನವಿ ಕುರಿತಂತೆ ಕೇಂದ್ರ ಸರಕಾರ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಇದು ಭಾರತದ ಮೊದಲ ಸಿಖ್ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಮಾಡುತ್ತಿರುವ ಅವಮಾನ ಎಂದು ಕಾಂಗ್ರೆಸ್ ಟೀಕಿಸಿದೆ.
"ಇಂದು ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷರು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು, ಅವರ ಸಾಧನೆಯನ್ನು ಗೌರವಿಸಲು ಸ್ಮಾರಕವನ್ನು ನಿರ್ಮಿಸಬಹುದಾದ ಸ್ಥಳವನ್ನು ಗುರುತಿಸಲು ಪ್ರಸ್ತಾಪಿಸಿದ್ದರು. ಅವರ ಸಾಧನೆಗಳು ಮತ್ತು ದಶಕಗಳಿಂದ ದೇಶಕ್ಕೆ ಗಮನಾರ್ಹ ಸೇವೆ ಸಲ್ಲಿಸಿದ ಸೇವೆಗೆ ಅನುಗುಣವಾಗಿ ಅವರ ಅಂತ್ಯಕ್ರಿಯೆ ಮತ್ತು ಸ್ಮಾರಕಕ್ಕೆ ಸ್ಥಳವನ್ನು ಇನ್ನೂ ಗುರುತಿಸಲಾಗಲಿಲ್ಲ? ಇದು ಭಾರತದ ಮೊದಲ ಸಿಖ್ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ಉದ್ದೇಶಪೂರ್ವಕ ಮಾಡುತ್ತಿರುವ ಅವಮಾನವಲ್ಲದೆ ಬೇರೇನೂ ಅಲ್ಲ !" ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.