ಮಹಿಳೆಯ ಅಪಹರಣ ಪ್ರಕರಣ | ಜಾಮೀನು ಕೋರಿ ಮತ್ತೆ ಕೋರ್ಟ್ ಮೆಟ್ಟಿಲೇರಿದ ಎಚ್.ಡಿ.ರೇವಣ್ಣ
ಬೆಂಗಳೂರು : ಮೈಸೂರಿನ ಕೆ.ಆರ್.ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಲ್ಲಿ ಜಾಮೀನು ಕೋರಿ ಸಲ್ಲಿಸಿದ್ದು, ನಾಳೆ ವಿಚಾರಣೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕ್ರಮ
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ (ವಾಟ್ಸಾಪಿನಂತಹ ಮೆಸೆಂಜರ್ ಆಪ್ ಮೂಲಕವೂ ಸೇರಿ) ಹಂಚುವುದು ತಂತ್ರಜ್ಞಾನ ಕಾಯಿದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂಥದ್ದರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಇದು ಸಂಬಂಧಿಸಿದ ಬಲಿಪಶು ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುವುದಾಗಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಸ್‌ಐಟಿ ಪ್ರಕಟನೆಯಲ್ಲಿ ತಿಳಿಸಿದೆ.