ಕೋಲಾರ: ಕುಡಿಯುವ ನೀರು ಒದಗಿಸುವ ಯರಗೋಳ್ ಡ್ಯಾಂ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯರಗೋಳ್ ಅಣೆಕಟ್ಟನ್ನು ಉದ್ಘಾಟಿಸಿದರು.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಯರಗೋಳು ಗ್ರಾಮದ ಬಳಿ ವ್ಯರ್ಥವಾಗಿ ತಮಿಳುನಾಡಿಗೆ ಹರಿದು ಹೋಗುತ್ತಿದ್ದ ನೀರಿಗೆ ಅಡ್ಡಲಾಗಿ ಡ್ಯಾಂ ನಿರ್ಮಾಣ ಮಾಡಿ ಕೋಲಾರ, ಬಂಗಾರಪೇಟೆ, ಮಾಲೂರು ಪಟ್ಟಣ ಹಾಗೂ 45 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇದಾಗಿದೆ.
ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಒಟ್ಟು 2,197 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.
ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಸಂಸದರಾದ ಮುನಿಸ್ವಾಮಿ, ಕೋಲಾರ - ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ವೈ.ನಂಜೇಗೌಡ, ಎಸ್.ಎನ್. ನಾರಾಯಣಸ್ವಾಮಿ ಉಪಸ್ಥಿತರಿದ್ದರು.