ಕೋಲಾರ| ವಸತಿ ಶಾಲೆ ವಿದ್ಯಾರ್ಥಿಗಳಿಂದ ಶೌಚ ಗುಂಡಿ ಸ್ವಚ್ಛತೆ: ಪ್ರಾಶುಪಾಲರು ಸೇರಿದಂತೆ ಇಬ್ಬರ ಬಂಧನ

Update: 2023-12-17 17:45 GMT

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಶುಪಾಲರು ಸೇರಿದಂತೆ ಇಬ್ಬರನ್ನು  ಪೊಲೀಸರು ಬಂಧಿಸಿದ್ದಾರೆ.

ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಬಂಧಿತರು. ಹಾಸ್ಟೆಲ್ ವಾರ್ಡನ್ ಮಂಜುನಾಥ್ ಮತ್ತು ಅತಿಥಿ ಶಿಕ್ಷಕ ಅಭಿಷೇಕ್‌ ಪರಾರಿ ಆಗಿದ್ದು, ಹುಡುಕಾಟ ನಡೆಸಲಾಗುತ್ತಿದೆ.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ದೂರು ಹಿನ್ನೆಲೆ ಮಲಹೊರುವ ಪದ್ಧತಿ ನಿಯಂತ್ರಣ ಕಾಯ್ದೆ, ಅಟ್ರಾಸಿಟಿ ಕಾಯ್ದೆಯಡಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಮಕ್ಕಳಿಗೆ ಕಿರುಕುಳ

ಕಳೆದ ಕೆಲವು ದಿನಗಳಿಂದ ಮಕ್ಕಳಿಗೆ ವಿವಿಧ ರೀತಿಯಲ್ಲಿ ಕಿರುಕುಳ ಕೂಡ ನೀಡಲಾಗುತ್ತಿದೆ  ಎಂದು ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಅಭಿಷೇಕ್, ಹಾಗೂ ವಾರ್ಡನ್ ಮಂಜುನಾಥ್ ಸೇರಿ ಕೆಲವು ಶಿಕ್ಷಕರ ವಿರುದ್ಧ ಆರೋಪ ಕೇಳಿಬಂದಿತ್ತು. ಮಕ್ಕಳಿಗೆ ಥಳಿಸುತ್ತಿರೋ, ಶಿಕ್ಷೆ ಕೊಡುತ್ತಿರುವ ವಿಡಿಯೋಗಳು ವೈರಲ್ ಆಗಿದೆ.

ಈ ವಸತಿ ಶಾಲೆಯಲ್ಲಿ ಮಕ್ಕಳಿಗೆ ಕಿರುಕುಳ ಆರೋಪದ ಜೊತೆಗೆ ಮತ್ತೊಂದು ಗಂಭೀರ ಆರೋಪವೂ ಕೇಳಿಬಂದಿದೆ. ಖಾಸಗಿ ಸುದ್ದಿವಾಹಿನಿ ಜೊತೆ ಪೊಷಕರೊಬ್ಬರು ಮತ್ತೊಂದು ಸ್ಟೋಟಕ ಹೇಳಿಕೆ ನೀಡಿದ್ದು, ಹೆಣ್ಣು ಮಕ್ಕಳು ಬಟ್ಟೆ ಬದಲಿಸುವ ಪೊಟೋ ಕೂಡ ತಗೆಯಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News