ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕನಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ

Update: 2023-12-25 10:30 GMT

ಬೆಂಗಳೂರು: ಕರ್ನಾಟಕ ವಿಧಾನಪರಿಷತ್  ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರಧ್ಯಕ್ಷ  ಜೆ.ಪಿ ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ.

ವಿಧಾನ ಪರಿಷತ್ ವಿಪಕ್ಷ ನಾಯಕನ ಜೊತೆಗೆ ವಿಧಾನಸಭೆ ಉಪ ನಾಯಕ, ಮುಖ್ಯ ಸಚೇತಕರನ್ನು ಸಹ ನೇಮಕ ಮಾಡಲಾಗಿದೆ.

ವಿಧಾನಪರಿಷತ್ ವಿಪಕ್ಷ ಉಪನಾಯಕನಾಗಿ ಸುನೀಲ್ ವಲ್ಯಾಪುರೆ ಅವರನ್ನು ನೇಮಕ ಮಾಡಿದರೆ, ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ನೇಮಕವಾಗಿದ್ದಾರೆ. ಹಾಗೆಯೇ ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಆಯ್ಕೆಯಾದರೆ, ವಿಧಾನಪರಿಷತ್​ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News