ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಕೆ.ಪಿ.ನಂಜುಂಡಿ

Update: 2024-04-24 06:42 GMT

ಬೆಂಗಳೂರು : ಬಿಜೆಪಿಯ ವಿಧಾನಪರಿಷತ್‌​ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಪಿ.ನಂಜುಂಡಿ ಇಂದು(ಎ.24) ಡಿ.ಕೆ.ಶಿವಕುಮಾರ್‌ ಉಪಸ್ಥಿತಿಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದ ಕೆ.ಪಿ.ನಂಜುಂಡಿ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಪಕ್ಷಕ್ಕೆ ಬರಮಾಡಿಕೊಂಡರು.

ನಿನ್ನೆ ಕೆ.ಪಿ ನಂಜುಂಡಿ ಅವರು ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ್ದ ಕೆ.ಪಿ ನಂಜುಂಡಿ ಅವರು ಬಿಜೆಪಿ ವಿರುದ್ದ ಅಸಮಾಧಾನ ಹೊರಹಾಕಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News