ಕೆಪಿಎಸ್ಸಿ ಪರೀಕ್ಷೆ ಮುಂದೂಡಿಕೆ: ಪರಿಷ್ಕೃತ ದಿನಾಂಕ ಶೀಘ್ರದಲ್ಲೆ ಪ್ರಕಟ

Update: 2025-03-21 19:49 IST
ಕೆಪಿಎಸ್ಸಿ ಪರೀಕ್ಷೆ ಮುಂದೂಡಿಕೆ: ಪರಿಷ್ಕೃತ ದಿನಾಂಕ ಶೀಘ್ರದಲ್ಲೆ ಪ್ರಕಟ
  • whatsapp icon

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ), 2023-24ನೆ ಸಾಲಿನ ಗೆಜೆಟೆಡ್ ಪ್ರೋಬೆಷನರಿ(ಕೆಎಎಸ್) ಗ್ರೂಪ್ ‘ಎ' ಮತ್ತು ‘ಬಿ' ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಗೆ ನಿಗದಿ ಮಾಡಿದ್ದ ದಿನಾಂಕವನ್ನು ಮುಂದೂಡಲಾಗಿದೆ ಎಂದು ಪ್ರಕಟಿಸಿದೆ.

ಶುಕ್ರವಾರ ಕೆಪಿಎಸ್ಸಿ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದು, ಮುಖ್ಯ ಪರೀಕ್ಷೆಯನ್ನು ಮಾರ್ಚ್ 28, 29, ಎಪ್ರಿಲ್ 1 ಹಾಗೂ 2ರಂದು ನಡೆಸಲು ಕೆಪಿಎಸ್ಸಿ, 2025ರ ಫೆಬ್ರವರಿ 13ರಂದು ಪ್ರಕಟಿಸಿದ್ದ ಅಧಿಸೂಚನೆಯಲ್ಲಿ ತಿಳಿಸಿತ್ತು.

ಆದರೆ, ಇದೀಗ ಕಾರಣಾಂತರಗಳಿಂದಾಗಿ ಪರೀಕ್ಷೆ ಮುಂದೂಡಿರುವುದಾಗಿ ಹೇಳಿಕೆ ಬಿಡುಗಡೆ ಮಾಡಿದೆ. ಅಲ್ಲದೆ, ಗೆಜೆಟೆಡ್ ಪ್ರೋಬೆಷನರಿ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲೇ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News