ವಸ್ತುವಿನ ಗುಣಮಟ್ಟ, ಗ್ರಾಹಕರ ಅಭಿರುಚಿಗೆ ತಕ್ಕಂತೆ ʼಕೆಎಸ್ ಡಿಎಲ್ʼ ಉತ್ಪಾದನೆಯಲ್ಲಿ ತೊಡಗಿದೆ: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

Update: 2024-01-20 12:30 GMT

ಬೆಂಗಳೂರು: ವಸ್ತುವಿನ ಗುಣಮಟ್ಟ ಹೆಚ್ಚಿಸುವ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ ಕೆಎಸ್ ಡಿಎಲ್ ಉತ್ಪಾದನೆಯಲ್ಲಿ ತೊಡಗಿ ಲಾಭದಾಯಕವಾಗಿ ಪ್ರಗತಿ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಸ್ಪರ್ಧಾತ್ಮಕ ಯುಗದಲ್ಲಿ ಖಾಸಗಿ ಸಂಸ್ಥೆಗಳ ಜತೆ ಪೈಪೋಟಿ ಮಾಡುವಂತಹ ಗುಣಮಟ್ಟವನ್ನು ನಾವು ಕಾಪಾಡಿ ಕೊಳ್ಳಬೇಕು. ಇದರಲ್ಲಿ ಕೆಎಸ್ ಡಿಎಲ್ ಯಶಸ್ಸು ಗಳಿಸಿದೆ. ಸಚಿವ ಎಂ.ಬಿ.ಪಾಟೀಲ್ ಅವರು ಕೆಎಸ್ ಡಿಎಲ್ ನ ಘನತೆ ಹೆಚ್ಚಿಸಿ ಲಾಭದಾಯಕ ಪ್ರಗತಿ ಕಾಣಿಸಿದ್ದಾರೆ ಎಂದು ಸಿಎಂ ಮೆಚ್ಚುಗೆ ಸೂಚಿಸಿದರು.

ಕರ್ನಾಟಕ ಮತ್ತು ಮಾರ್ಜಕ ನಿಯಮಿತದ 21ನೂತನ ವೈವಿದ್ಯಮಯ ಉತ್ಪನ್ನಗಳನ್ನು ಲೋಕಾರ್ಪಣೆ ಗೊಳಿಸಿದರು.

ಸರಕಾರಿ ಸಂಸ್ಥೆ ಮತ್ತು ಸರಕಾರಿ ಕಾರ್ಖಾನೆ ಎಂದರೆ ಯಾರೂ ಮೂಗು ಮುರಿಯದಂತಹ ರೀತಿಯಲ್ಲಿ ಪ್ರಗತಿ ಕಾಣಿಸಿ ಮಾದರಿಯಾಗಿ ಕೆಎಸ್ ಡಿಎಲ್ ಬೆಳವಣಿಗೆ ಕಂಡಿರುವುದಕ್ಕೆ ಎಲ್ಲರಿಗೂ ಅಭಿನಂದಿಸಿದ ಅವರು ಸಂಸ್ಥೆಯ ಉತ್ಪನ್ನಗಳನ್ನು ನಕಲು ಮಾಡುವವರ ಮೇಲೆ ತೀವ್ರ ನಿಗಾ ವಹಿಸುವಂತೆ ಇದೇ ಸಂದರ್ಭದಲ್ಲಿ ಸೂಚಿಸಿದರು.

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಕೆಎಸ್ ಡಿಎಲ್ ನ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಪ್ರಶಾಂತ್, ಕೆಎಸ್ ಡಿಎಲ್ ಸಲಹೆಗಾರ ರಜನೀಕಾಂತ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News