ಕೆಎಸ್ಸಾರ್ಟಿಸಿ ಮುಡಿಗೆ 3 ರಾಷ್ಟ ಮಟ್ಟದ ಪ್ರಶಸ್ತಿಗಳ ಗರಿ

Update: 2025-03-09 18:03 IST
ಕೆಎಸ್ಸಾರ್ಟಿಸಿ ಮುಡಿಗೆ 3 ರಾಷ್ಟ ಮಟ್ಟದ ಪ್ರಶಸ್ತಿಗಳ ಗರಿ
  • whatsapp icon

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಗೆ ದೇಶದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ (ಎಎಸ್‍ಆರ್‌ಟಿಯು) 2023-24ನೇ ಸಾಲಿನ ಒಟ್ಟು 3 ರಾಷ್ಟ್ರೀಯ ಸಾರ್ವಜನಿಕ ಬಸ್ ಸಾರಿಗೆ ಪ್ರಶಸ್ತಿಗಳು, ನ್ಯಾಷನಲ್ ಟ್ರಾನ್ಸ್‌ ಫೋರ್ಟ್ ಎಕ್ಸಲೆನ್ಸ್ ಅವಾರ್ಡ್‍ಗಳು ಲಭಿಸಿವೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ವ್ಯಾಪ್ತಿಯಲ್ಲಿ ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಸದಸ್ಯತ್ವವನ್ನು ಹೊಂದಿವೆ. ಸದರಿ ಒಕ್ಕೂಟವು 13ನೇ ಆಗಸ್ಟ್ 1965ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಭಾರತ ಸರಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುತ್ತದೆ. ಈ ಸಂಸ್ಥೆಯು 59 ವರ್ಷಗಳ ಅನುಭವವನ್ನು ಹೊಂದಿದ್ದು, ದೇಶದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ.

ಕೆಎಸ್‍ಆರ್‌ಟಿಸಿಗೆ ಅಶ್ವಮೇಧ ಬ್ರ್ಯಾಂಡಿಂಗ್ ಹಾಗೂ ವರ್ಚಸ್ಸು ಅಭಿವೃದ್ಧಿ, ಕಾರ್ಮಿಕರ ಕಲ್ಯಾಣಕ್ಕಾಗಿ ಕೈಗೊಂಡಿರುವ ವಿನೂತನ ಯೋಜನೆಗಳು ಹಾಗೂ ಗಣಕೀಕರಣ ಉಪಕ್ರಮಗಳಿಗಾಗಿ ಮೂರು ಪ್ರಶಸ್ತಿಗಳು ಲಭಿಸಿವೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದ ವತಿಯಿಂದ ಹೊಸದಿಲ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯ ಸಂಚಾರ ವ್ಯವಸ್ಥಾಪಕ ಗುರುರಾಜ ಎಚ್, ಹಾಗೂ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ರಾಧ ಅವರಿಗೆ ನಿಗಮದ ಪರವಾಗಿ ನಿವೃತ್ತ ಐಪಿಎಸ್ ಡಾ.ಕಿರಣ್ ಬೇಡಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು.

ಇದೆ ಸಂದರ್ಭದಲ್ಲಿ ಅಂತರ್‌ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಚಾಲಕಿ ಸುಲೋಚನಾ ದೇವಿ ಅವರಿಗೆ 26 ವರ್ಷಗಳ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News