ಮಡಿಕೇರಿ | ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ನೆಲಕ್ಕುರುಳಿದ ಜನರಲ್ ತಿಮ್ಮಯ್ಯ ಪ್ರತಿಮೆ

Update: 2023-08-21 06:22 GMT

ಮಡಿಕೇರಿ ಆ.21 : ಕೆಎಸ್ಸಾರ್ಟಿಸಿ ಬಸ್ ವೊಂದು ಢಿಕ್ಕಿ ಯಾದ ಪರಿಣಾಮ ಮಡಿಕೇರಿ ನಗರದ ಹೃದಯ ಭಾಗದಲ್ಲಿದ್ದ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿದೆ.

ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಡಿಪೋದಿಂದ ಬಸ್ ನಿಲ್ದಾಣಕ್ಕೆ ಹೊರಟಿದ್ದ ಬಸ್ ಪಿಕಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಜನರಲ್ ತಿಮ್ಮಯ್ಯ ವೃತ್ತಕ್ಕೆ ಢಿಕ್ಕಿಯಾಗಿದೆ ಎಂದು ಹೇಳಲಾಗಿದೆ.

ಈ ಸಂದರ್ಭ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿದೆ. ಬಸ್ ಚಾಲಕ ಹಾಗೂ ನಿರ್ವಾಹಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆನ್ನಲಾಗಿದೆ.

ತಿಮ್ಮಯ್ಯ ಅವರ ಪ್ರತಿಮೆಯನ್ನು ತಿಮ್ಮಯ್ಯ ಸ್ಮಾರಕ ಭವನದ ಆವರಣಕ್ಕೆ ಸ್ಥಳಾಂತರಿಸಲಾಗಿದೆ. ಘಟನೆ ಕುರಿತು ವಿಷಾದ ವ್ಯಕ್ತಪಡಿಸಿರುವ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು, ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಪುನರ್ ಪ್ರತಿಷ್ಠಾಪಿಸಲು ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News