ಗುತ್ತಿಗೆದಾರರ ಸಮಸ್ಯೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುತ್ತಿರುವ ಸರಕಾರಕ್ಕೆ ಅಭಿನಂದನೆಗಳು : ಕೆಂಪಣ್ಣ
ಬೆಂಗಳೂರು: ಗುತ್ತಿಗೆದಾರರ ಸಮಸ್ಯೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅಭಿನಂದನೆ ಸಲ್ಲಿಸಿದ್ದಾರೆ.
ಮಗಳವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳಲ್ಲಿ ಉಳಿದಿರುವ ಬಾಕಿ ಮೊತ್ತವನ್ನು ಶೀಘ್ರ ಬಿಡುಗಡೆ ಮಾಡಲು ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಚಿವರನ್ನು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದದ ವತಿಯಿಂದ ಅಭಿನಂದನೆಗಳು ಎಂದು ತಿಳಿಸಿದರು.
ಬಿಬಿಎಂಪಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ, ವಸತಿ, ಸಣ್ಣ ನೀರಾವರಿ ಇಲಾಖೆಗಳಲ್ಲಿ ಬಾಕಿ ಇರುವ ಗುತ್ತಿಗೆದಾರರ ಮೊತ್ತವನ್ನು ಶೀಘ್ರ ಬಿಡುಗಡೆಯಾಗಲಿದೆ. ನಿರಂತರವಾಗಿ ಸರಕಾರದ ಜೊತೆಯಲ್ಲಿ ನಡೆದ ಸಭೆಗಳಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರು ಈ ಭರವಸೆಯನ್ನು ನೀಡಿದ್ದಾರೆ ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆಯ ಸಣ್ಣ ಗುತ್ತಿಗೆದಾರರ ಬಿಲ್‍ಗಳನ್ನು ಪಾವತಿ ಮಾಡಿರುವುದಕ್ಕೆ ಮುಖ್ಯಮಂತ್ರಿ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿನಂದನೆಗಳು. ಬಿಬಿಎಂಪಿಯಲ್ಲಿಯೂ ಬಾಕಿ ಬಿಲ್ ಪಾವತಿ ಮಾಡಲು ಉಪಮುಖ್ಯಮಂತ್ರಿ ಡಿ.ಕೆಶಿವಕುಮಾರ್ ಅವರು ಕ್ರಮವಹಿಸಿದ್ದಾರೆ ಎಂದು ತಿಳಿಸಿದರು.