ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನ: ಕುಮಾರಸ್ವಾಮಿ

Update: 2025-03-20 20:54 IST
Photo of  HD Kumaraswamy

ಎಚ್.ಡಿ.ಕುಮಾರಸ್ವಾಮಿ

  • whatsapp icon

ಬೆಂಗಳೂರು : ‘ನಾನು ಭೂ ಒತ್ತುವರಿ ಮಾಡಿದ್ದೇನೋ ಇಲ್ಲವೋ ಕಾನೂನು ವ್ಯಾಪ್ತಿಯಲ್ಲಿ ತೀರ್ಮಾನವಾಗುತ್ತದೆ. ಈಗ ನನ್ನ ಮರ್ಯಾದೆ ವಿಷಯ ಇರಲಿ, ಇವತ್ತು ಸ್ವಪಕ್ಷೀಯರೇ ಈ ಮರ್ಯಾದೆಗೇಡಿಯ ಮಾನವನ್ನು ವಿಧಾನಸೌಧದಲ್ಲಿಯೇ ಹರಾಜು ಹಾಕಿದ್ದಾರೆ! ಅದಕ್ಕೆ ಉತ್ತರವೇನು?’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ‘ಹನಿಟ್ರ್ಯಾಪ್’ ವಿಚಾರಕ್ಕೆ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಮರ್ಯಾದೆಗೇಡಿ, ಕಿಡಿಗೇಡಿ ನನ್ನ ಮೇಲೆ ಮತ್ತೆ ವಿಷಕಕ್ಕಿರುವುದು ಹತಾಶೆ ಅಷ್ಟೇ. ಆಕಾಶಕ್ಕೆ ಉಗಿದರೆ ಮುಖದ ಮೇಲೆಯೇ ಬೀಳುತ್ತದೆ ಮಂಕೆ..! ಇಷ್ಟೂ ಸಾಮಾನ್ಯಜ್ಞಾನವೂ ಇಲ್ಲವೇ? ಕುಂಬಳಕಾಯಿ ಕಳ್ಳನಿಗೆ ಕೋಪ ಬಂದಿದೆ. ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ.. ಇದೂ ಒಂದು ಬದುಕೇ..? ಎಂದು ವಾಗ್ದಾಳಿ ನಡೆಸಿದ್ದಾರೆ.

‘ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿರುವ ವಿಷಸರ್ಪ ನನ್ನಡೆಗೆ ನಾಲಿಗೆ ಚಾಚಿದೆ! ಇಂತಹ ಕ್ರಿಮಿನಲ್ ಒಬ್ಬ ಕೆಟ್ಟ ಅಲೋಚನೆಗಳಲ್ಲಿ ದಿನಪೂರ್ತಿ ಮುಳುಗಿರುವುದು ಸಹಜ. ‘ಕ್ರಿಮಿನಲ್'ನ ಚಾಳಿಯೇ ಧಮ್ಕಿ ಹಾಕುವುದು. ವಿಷಕ್ರಿಮಿಯ ಕೆಲಸ ಎಲ್ಲರನ್ನೂ ಕಚ್ಚುವುದು. ಇದರಲ್ಲಿ ನನಗೇನೂ ಅಚ್ಚರಿ ಇಲ್ಲ’ ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News