ನಮ್ಮ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ: ಕುಮಾರಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು

Update: 2024-05-22 15:55 GMT

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಪೋನ್ ಅನ್ನು ಟ್ಯಾಪಿಂಗ್ ಮಾಡಲಾಗಿದೆ ಎಂದು ಆರೋಪಿಸುತ್ತಿದ್ದಾರೆ. ಆದರೆ ನಮ್ಮ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಕುಟುಂಬದ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಮರೆಮಾಚಲು ಕುಮಾರಸ್ವಾಮಿ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ನಮ್ಮ ರಾಜಕೀಯ ಜೀವನದಲ್ಲಿ ಫೋನ್ ಟ್ಯಾಪಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ ಎಂದರು.


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News