ದಿಲ್ಲಿಯಲ್ಲಿ ಕುಮಾರಸ್ವಾಮಿ, ಸತೀಶ್ ಜಾರಕಿಹೊಳಿ ಡಿನ್ನರ್‌ ಮೀಟಿಂಗ್ ?

Update: 2025-03-26 11:53 IST
ದಿಲ್ಲಿಯಲ್ಲಿ ಕುಮಾರಸ್ವಾಮಿ, ಸತೀಶ್ ಜಾರಕಿಹೊಳಿ ಡಿನ್ನರ್‌ ಮೀಟಿಂಗ್ ?

ಕುಮಾರಸ್ವಾಮಿ, ಸತೀಶ್ ಜಾರಕಿಹೊಳಿ

  • whatsapp icon

ಹೊಸದಿಲ್ಲಿ: ಸಚಿವ ಸತೀಶ್ ಜಾರಕಿಹೊಳಿ ಅವರು ದಿಲ್ಲಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಸಭೆ ನಡೆಸಿದ್ದಾರೆ ಎನ್ನಲಾಗಿದ್ದು, ಉಭಯ ನಾಯಕರ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ಸತೀಶ್ ಜಾರಕಿಹೊಳಿ ಅವರಿಗೆ ಕುಮಾರಸ್ವಾಮಿ ಅವರು ಔತಣಕೂಟ ಆಯೋಜನೆ ಮಾಡಿದ್ದರು ಎನ್ನಲಾಗಿದೆ. ಆಹ್ವಾನ ಸ್ವೀಕರಿಸಿದ ಸತೀಶ್ ಜಾರಕಿಹೊಳಿ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವ ಸತೀಶ್ ಜಾರಕಿಹೊಳಿ ಕಳೆದ ಎರಡು ದಿನಗಳಿಂದ ದಿಲ್ಲಿಯಲ್ಲಿ ವಾಸ್ತವ್ಯ ಹೂಡಿದ್ದಾರೆ. ಕಾಂಗ್ರೆಸ್‌, ಜೆಡಿಎಸ್ ನಾಯಕರ ಈ ಭೇಟಿ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಆದರೆ ಈ ಡಿನ್ನರ್‌ ಮೀಟಿಂಗ್‌ ಆಗಿರುವ ಬಗ್ಗೆ ಸತೀಶ್ ಜಾರಕಿಹೊಳಿ ಅಥವಾ ಕುಮಾರಸ್ವಾಮಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News