ಕಾಫಿನಾಡಿನಲ್ಲಿ ಮಳೆ ಕೊರತೆ: 196 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತತ್ವಾರ ಸಾಧ್ಯತೆ

Update: 2023-09-02 18:50 GMT

 (File Photo| PTI)

ಚಿಕ್ಕಮಗಳೂರು, ಸೆ.2: ಮಳೆನಾಡೆಂದೇ ಹೆಸರಾಗಿರುವ ಕಾಫಿನಾಡಿನಲ್ಲಿ ಈ ಬಾರಿ ಮಳೆ ಕೈಕೊಟ್ಟಿದೆ. ಜುಲೈ ತಿಂಗಳಲ್ಲಿ ಕೆಲ ದಿನಗಳ ಕಾಲ ‘ಾರಾಕಾರವಾಗಿ ಸುರಿದಿದ್ದ ಮಳೆ ನಂತರ ಮಾಯವಾಗಿದ್ದು, ಮಳೆಯಿಂದಾಗಿ ತುಂಬಿ ತುಳುಕುತ್ತಿದ್ದ ನದಿ, ಹಳ್ಳ, ಕೆರೆ ಕಟ್ಟೆಗಳು ಬರಿದಾಗುತ್ತಿವೆ.

ಮಳೆಯ ಕೊರತೆಯಿಂದಾಗಿ ಜಿಲ್ಲೆಯ ಬಯಲು ಭಾಗದಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಲಾರಂಭಿಸಿದ್ದು, ಮಲೆನಾಡಿನ ಕೆಲ ಗ್ರಾಮಗಳಲ್ಲೂ ನೀರಿಗೆ ಬರ ಉಂಟಾಗಿದೆ. ಸೆಪ್ಟಂಬರ್ ತಿಂಗಳಲ್ಲೂ ಮಳೆ ಬಾರದಿದ್ದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಬಹುದಾದ 196 ಗ್ರಾಮಗಳನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪಟ್ಟಿ ಮಾಡಿದೆ. ಜಿಲ್ಲೆಯಲ್ಲಿ ಒಟ್ಟು 1013 ಗ್ರಾಮಗಳಿದ್ದು, ಈ ಪೈಕಿ ಕುಡಿಯುವ ನೀರಿನ ಸಮಸ್ಯೆ ಉಂಟಾಬಹುದಾದ ನೂರಾರು ಗ್ರಾಮಗಳಲ್ಲಿ ಸಂಬಂಧಿಸಿದ ಇಲಾಖಾಧಿಕಾರಿಗಳು ಮುಂಜಾಗ್ರತಾ ಕ್ರಮಕೈಗೊಳ್ಳಲು ಮುಂದಾಗಿದ್ದಾರೆ. ಟ್ಯಾಂಕರ್ ಮೂಲಕ ನೀರು ಪೂರೈಸಲು 184 ಜಲಮೂಲಗಳನ್ನು ಗುರುತಿಸಲಾಗಿದ್ದು, 20 ಖಾಸಗಿ ಕೊಳವೆಬಾವಿಗಳಿಂದಲೂ ನೀರು ಸರಬರಾಜು ಮಾಡಲು ಮುಂಜಾಗ್ರತಾ ಕ್ರಮವಹಿಸಲಾಗಿದೆ.

ಜುಲೈ ತಿಂಗಳಲ್ಲಿ ಸುಮಾರು 15 ದಿನಗಳ ಕಾಲ ಸುರಿದ ಭಾರೀ ಮಳೆಗೆ ಮಲೆನಾಡು ‘ಾಗದ ಹೇಮಾವತಿ, ತುಂಗಾ, ‘ದ್ರಾ ನದಿಗಳು ತುಂಬಿ ಹರಿದಿದ್ದವು. ಬಯಲು ‘ಾಗದ ಅಯ್ಯನಕೆರೆ, ಮದಗದಕೆರೆಗಳೂ ಮಳೆಯಿಂದಾಗಿ ಕೋಡಿ ಬಿದ್ದಿದ್ದವು. ಆದರೆ ಆಗಸ್ಟ್ ತಿಂಗಳಿಡೀ ಮಳೆಯ ಸುಳಿವು ಇಲ್ಲದಂತಾದ ಪರಿಣಾಮ ಸದ್ಯ ಮಲೆನಾಡಿನ ಜೀವನದಿಗಳು ಬರಿದಾಗಿವೆ. ತುಂಬಿದ್ದ ಕೆರೆಗಳಲ್ಲೂ ನೀರು ಖಾಲಿಯಾಗುತ್ತಿದೆ. ಸೆಪ್ಟಂಬರ್ ತಿಂಗಳಲ್ಲಿ ವರುಣ ಕೃಪೆತೋರದಿದ್ದಲಗಲಿ ಮಲೆ ನಾಡು ಸೇರಿದಂರೆ ಬಯಲು ಭಾಗದಲ್ಲಿ ನೀರಿನ ಮೂಲ ಗಳಲ್ಲಿ ನೀರಿನ ಲಭ್ಯತೆ ಕ್ಷೀಣಿಸಿ ಎಲ್ಲೆಡೆ ನೀರಿಗೆ ಹಾಹಾ ಕಾರ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 196 ಗ್ರಾಮಗಳನ್ನು ಗುರುತಿಸಿದೆ. ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಈಗಾಗಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಇಲಾಖಾಧಿಕಾರಿಗಳು ಮಾಡಿಕೊಂಡಿದ್ದಾರೆ.

ಕಳೆದ ವರ್ಷ ಮಲೆನಾಡು ಭಾಗದ ಮೂಡಿಗೆರೆ, ಕೊಪ್ಪ, ನರಸಿಂಹರಾಜಪುರ ಮತ್ತು ಚಿಕ್ಕಮಗಳೂರು ತಾಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು. ಈ ವರ್ಷ ಎಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತಾದರೂ ಜುಲೈ ತಿಂಗಳಲ್ಲಿ ಉತ್ತಮ ಮಳೆಯಾದ ಪರಿಣಾಮ ಸ್ವಲ್ಪಮಟ್ಟಿಗೆ ಕುಡಿಯುವ ನೀರಿನ ಸಮಸ್ಯೆ ಸು‘ಾರಿಸಿದೆ. ಕಳೆದ 2019-20ನೇ ಸಾಲಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದ ಗ್ರಾಮಗಳಿಗೆ 114 ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡಲಾಗಿತ್ತು. ಇದೇ ಟ್ಯಾಂಕರ್ಗಳ ಮೂಲಕ ಈ ಬಾರಿಯೂ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ನೀರು ಸರಬರಾಜು ಮಾಡಲು ಇಲಾಖಾಧಿಕಾರಿಗಳು ಕ್ರಮಕೈಗೊಂಡಿದ್ದಾರೆ. ಈ ಗ್ರಾಮಗಳಿಗೆ ಜಲಮೂಲಗಳು ಹಾಗೂ ಖಾಸಗಿ ಬೋರ್ವೆಲ್ಗಳ ಮೂಲಕ ನೀರು ಪೂರೈಸಲು ಸಿದ್ಧತೆ ಕೈಗೊಳ್ಳಲಾಗಿದೆ.

ಚಿಕ್ಕಮಗಳೂರು ತಾಲೂಕಿನಲ್ಲಿ ಒಟ್ಟು 213 ಗ್ರಾಮಗಳಿದ್ದು, ಈ ಪೈಕಿ 55 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಸಾ‘್ಯತೆಗಳಿವೆ. ಕಡೂರು ತಾಲೂಕಿನಲ್ಲಿ 246 ಗ್ರಾಮಗಳ ಪೈಕಿ 81 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆ ಇದೆ. ಕೊಪ್ಪ ತಾಲೂಕಿನ 80ಗ್ರಾಮಗಳ ಪೈಕಿ 2 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗಲಿದೆ. ಮೂಡಿಗೆರೆ ತಾಲೂಕಿನ 139 ಗ್ರಾಮಗಳ ಪೈಕಿ 12 ಗ್ರಾಮಗಳಲ್ಲಿ ನೀರಿಗೆ ಹಾಹಾಕಾರ ಉಂಟಾಗಲಿದೆ. ನರಸಿಂಹರಾಜಪುರ ತಾಲೂಕಿನ 58 ಗ್ರಾಮಗಳ ಪೈಕಿ 9 ಗ್ರಾಮಗಳಲ್ಲಿ, ಶೃಂಗೇರಿ ತಾಲೂಕಿನ 50 ಗ್ರಾಮಗಳ ಪೈಕಿ 2 ಗ್ರಾಮಗಳಲ್ಲಿ, ತರೀಕೆರೆ ತಾಲೂಕಿನ 227 ಗ್ರಾಮಗಳ ಪೈಕಿ 35 ಗ್ರಾಮಗಳಲ್ಲಿ ಕುಡಿಯುವ ನೀರಿನ ಭಾರೀ ಸಮಸ್ಯೆ ಉಂಟಾಗಬಹುದು ಎಂದು ಇಲಾಖಾಧಿಕಾರಿಗಳು ಪಟ್ಟಿ ಮಾಡಿದ್ದಾರೆ.

ಸೆಪ್ಟಂಬರ್‌ ನಲ್ಲಿ ಮಳೆಯಾಗುವ ನಿರೀಕ್ಷೆ

ಈ ತಿಂಗಳ ಮೊದಲ ವಾರದಲ್ಲಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಜಿಲ್ಲೆಯ ಬಯಲು ಭಾಗ ಅಜ್ಜಂಪುರ, ಕಡೂರು, ತರೀಕೆರೆ, ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ಶುಕ್ರವಾರ ಸುಮಾರು 1ಗಂಟೆಗಳ ಕಾಲ ಭಾರೀ ಮಳೆ ಸುರಿದಿರುವುದು ಸೆಪ್ಟಂಬರ್ ತಿಂಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಅಧಿಕಾರಿಗಳದ್ದಾಗಿದೆ. ಉತ್ತಮ ಮಳೆಯಾದಲ್ಲಿ ಮಲೆನಾಡು ಹಾಗೂ ಬಯಲು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ. ಒಂದು ವೇಳೆ ಮಳೆಯಾಗದಿದ್ದಲ್ಲಿ ಜಿಲ್ಲೆಯ 196 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಭಾರೀ ತೊಂದರೆಯಾಗಲಿದ್ದು, ಈ ಗ್ರಾಮಗಳಿಗೆ ವಿವಿ‘ ಜಲಮೂಲಗಳಿಂದ ಹಾಗೂ ಖಾಸಗಿ ಕೊಳವೆ ಬಾವಿಗಳಿಂದ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಈಗಾಗಲೇ ಮುಂಜಾಗ್ರತಾ ಕ್ರಮಕ್ಕೆ ಸಿದ್ಧತೆ ಕೈಗೊಂಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News