ಕೇಂದ್ರ ಸಚಿವೆ ಅನ್ನಪೂರ್ಣ ದೇವಿ ಅಧ್ಯಕ್ಷತೆಯಲ್ಲಿ ವಿಡಿಯೋ ಕಾನ್ಫರೆನ್ಸ್ : ಲಕ್ಷ್ಮಿ ಹೆಬ್ಬಾಳ್ಕರ್ ಭಾಗಿ
Update: 2024-08-10 15:35 GMT
ಬೆಂಗಳೂರು : ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಅನ್ನಪೂರ್ಣ ದೇವಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಎಲ್ಲ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದರು.
ಇಲಾಖೆ ವತಿಯಿಂದ ಕರ್ನಾಟಕದಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳು, ಪ್ರಗತಿ ಕುರಿತು ಕೇಂದ್ರ ಸಚಿವರಿಗೆ ಮಾಹಿತಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಬರಬೇಕಾದ ಎಲ್ಲ ಅನುದಾನದ ಕುರಿತು ಮತ್ತೊಮ್ಮೆ ಸಭೆಯಲ್ಲಿ ಪ್ರಸ್ತಾಪ ಮಾಡಿದರು.
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಶಾಮಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.