ಮಡಿಕೇರಿ | ಮಣ್ಣು ಕುಸಿತ ಪ್ರಕರಣ; ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Update: 2023-10-31 18:04 GMT

ಮಡಿಕೇರಿ: ಇಂದು (ಮಂಗಳವಾರ) ಸಂಜೆ ಇಲ್ಲಿನ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ  ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. 

ʼʼಮಡಿಕೇರಿಯಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಮೃತಪಟ್ಟ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದುʼʼ ಎಂದು ಅವರು X ನಲ್ಲಿ ಪ್ರಕಟಿಸಿದ್ದಾರೆ. 

ಇನ್ನು ಗಾಯಗೊಂಡ ಇಬ್ಬರು ಕಾರ್ಮಿಕರ ಆರೋಗ್ಯವನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಆಸ್ಪತ್ರೆಗೆ ಭೇಟಿ ನೀಡಿ ವಿಚಾರಿಸಿದರು.

ಘಟನೆ ಸಂಭವಿಸಲು ನಿರ್ಲಕ್ಷ್ಯವೇ ಕಾರಣವಾಗಿದ್ದು, ಸಂಬಂಧ‍ಪಟ್ಟವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಸೂಚಿಸಿದರು.ಇದಕ್ಕೂ ಮುನ್ನ ಅವರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News