ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ: ಬಿಜೆಪಿ ಕಾಲೆಳೆದ ಕಾಂಗ್ರೆಸ್

Update: 2023-07-01 07:22 GMT

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾ ರಚನೆಯಾಗಿ ಒಂದು ತಿಂಗಳು ಕಳೆಯುತ್ತಾ ಬಂದಿದೆ. ಜುಲೈ 3 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಆದರೆ ಬಿಜೆಪಿ ಮಾತ್ರ ವಿರೋಧ ಪಕ್ಷದ ನಾಯಕನನ್ನ ಇನ್ನೂ ಆಯ್ಕೆ ಮಾಡಿಲ್ಲ. ಹೀಗಾಗಿ ಖಾಲಿ ಇರುವ ಕರ್ನಾಟಕದ ವಿಧಾನಸಭೆ ವಿರೋಧ ಪಕ್ಷದ ನಾಯಕನ ಹುದ್ದೆಗೆ ಸೂಕ್ತ ವ್ಯಕ್ತಿಯೊಬ್ಬರು ಬೇಕಾಗಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ''ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ'' ಎಂದು ಕಾಲೆಳೆದಿದೆ. 

''ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು.ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ'' ಎಂದು ಕಾಂಗ್ರೆಸ್ ಟೀಕಿಸಿದೆ.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News