ರಾಜ್ಯಪಾಲರ ಕಚೇರಿಯಿಂದಲೇ ಮಾಹಿತಿ ಸೋರಿಕೆ: ಸಿದ್ದರಾಮಯ್ಯ ಸಂಶಯ

Update: 2024-09-22 13:28 GMT

ಬೆಂಗಳೂರು: ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ವಿಚಾರದಲ್ಲಿ ‘ರೀ ಡೂ ಮಾಡಿ’ ಎಂದು ಬಿಡಿಎಗೆ ಸುಪ್ರೀಂ ಕೋರ್ಟ್ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ರವಿವಾರ ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣದ ಬಗ್ಗೆ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರು ರಾಜ್ಯ ಸರಕಾರಕ್ಕೆ ಪತ್ರ ಬರೆದಿದ್ದರೆ, ಸರಕಾರ ಈ ಬಗ್ಗೆ ಗಮನಹರಿಸಲಿದೆ. ರಾಜ್ಯಪಾಲರು, ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರ ಸೋರಿಕೆಯಾಗಿದ್ದರೆ ಅದು ರಾಜ್ಯಪಾಲರ ಕಚೇರಿಯಿಂದಲೇ ಆಗಿರಬೇಕು. ಈ ಬಗ್ಗೆ ತನಿಖೆಯಾಗಲಿ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News