ವಿಧಾನ ಪರಿಷತ್ ಚುನಾವಣೆ | ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Update: 2024-06-03 11:14 GMT

Photo :x/@BJP4Karnataka

ಬೆಂಗಳೂರು : ವಿಧಾನ ಪರಿಷತ್ ಚುನಾವಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿಗಳಾದ ಸಿ.ಟಿ.ರವಿ, ಎನ್.ರವಿಕುಮಾರ್ ಮತ್ತು ಎಂ.ಜಿ. ಮುಳೆ ಅವರು ಇಂದು ವಿಧಾನಸೌಧದ 1ನೇ ಮಹಡಿ, ಕೊಠಡಿ ಸಂಖ್ಯೆ 121ರಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಶಾಸಕರಾದ ಗೋಪಾಲಯ್ಯ, ಮುನಿರತ್ನ, ಸುನಿಲ್ ಕುಮಾರ್, ಸುರೇಶ್, ಮಾನಪ್ಪ ವಜ್ಜಲ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಹನುಮಂತ ನಿರಾಣಿ ಅವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News