ಡೆಲಿವರಿ ಬಾಯ್ ಗಳಿಗೆ ಜೀವ ವಿಮೆ ಯೋಜನೆ: ಅಧಿಸೂಚನೆ ಪ್ರಕಟ

2023-24ನೇ ಸಾಲಿನ ಬಜೆಟ್ ಘೋಷಣೆಯಂತೆ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತ ವಿಮಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.

Update: 2023-09-12 04:48 GMT

FIle Photo: source: PTI

ಬೆಂಗಳೂರು, ಸೆ.12: ಪ್ರಸಕ್ತ (2023-24ನೇ) ಸಾಲಿನ ರಾಜ್ಯ ಬಜೆಟ್ ಘೋಷಣೆಯಂತೆ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತ ವಿಮಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ.

'ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ' ಎಂದು ಹೆಸರಿಸಲಾಗಿದ್ದು,ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಘೋಷಣೆಯಂತೆ ಇ-ಕಾಮರ್ಸ್ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ಜೀವ ವಿಮೆ ಹಾಗೂ ಅಪಘಾತ ವಿಮಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. ಇದು ಜೀವ ವಿಮೆ/ಅಪಘಾತ ವಿಮೆ ಅಥವಾ ಎರಡೂ ಸೌಲಭ್ಯಗಳನ್ನು ಒಳಗೊಂಡಿರುತ್ತದೆ. ಸ್ವಿಗ್ಗಿ, ಝೊಮ್ಯಾಟೋಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಝಾನ್, ಪ್ಲಿಪ್ ಕಾರ್ಟ್, ಬಿಗ್ ಬಾಸ್ಕೆಟ್ ನಂತಹ ಕಂಪೆನಿಗಳ ಉದ್ಯೋಗಿಗಳಿಗೆ 2 ಲಕ್ಷ ರೂ. ಜೀವ ವಿಮೆ ಹಾಗೂ 2 ಲಕ್ಷ ರೂ. ಅಪಘಾತ ವಿಮೆ ಸೇರಿದಂತೆ 4 ಲಕ್ಷ ರೂ. ವಿಮೆ ದೊರೆಯಲಿದೆ.

ಗಿಗ್ ಕಾರ್ಮಿಕರು ರಾಜ್ಯ ಸರಕಾರದ ಸೇವಾ ಸಿಂಧು ಪೋರ್ಟಲ್ ನಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಅರ್ಜಿ ಸಲ್ಲಿಸಿ ಗುರುತಿನ ಚೀಟಿ ಪಡೆಯಬೇಕಾಗುತ್ತದೆ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 18ರಿಂದ 60 ವರ್ಷದ ಎಲ್ಲ ಪ್ಲಾಟ್ ಫಾರಂ ಆಧಾರಿತ ಗಿಗ್ ಕಾರ್ಮಿಕರು ಈ ಯೋಜನೆಗೆ ಒಳಪಡುತ್ತಾರೆ. ಆದರೆ ಫಲಾನುಭವಿಗಳು ಆದಾಯ ತೆರಿಗೆ ಪಾವತಿದಾರರಾಗಿಬಾರದು. ಇಎಸ್ಐ ಮತ್ತು ಇಪಿಎಫ್ ಸೌಲಭ್ಯ ಹೊಂದಿರಬಾರದು.

ನೋಂದಣಿಗೆ ಸಲ್ಲಿಸಬೇಕಾದ ದಾಖಲೆಗಳು:

ಯೋಜನೆಯ ಪ್ರಯೋಜನ ಪಡೆಯಲು ಫಲಾನುಭವಿಗೆ ಅಪಘಾತ ಅಥವಾ ಆತನ ಸಾವು ಸಂಭವಿಸಿದ್ದಲ್ಲಿ ಒಂದು ವರ್ಷದೊಳಗೆ ಅರ್ಜಿ ಸಲ್ಲಿಸಬೇಕು.  ಅರ್ಜಿ ಸಲ್ಲಿಸುವ ವೇಳೆ ಉದ್ಯೋಗದಾತರಿಂದ ಪಡೆದ ಉದ್ಯೋಗ ಪ್ರಮಾಣ ಪತ್ರ/ಗುರುತಿನ ಚೀಟಿ, ಆಧಾರ ಸಂಖ್ಯೆ, ಇ-ಶ್ರಮ ಗುರುತಿನ ಚೀಟಿ ಸಂಖ್ಯೆ, ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ವಿಳಾಸ ಪುರಾವೆಗಾಗಿ ಯಾವುದಾದರೂ ದಾಖಲೆ (ಮತದಾರರ ಗುರುತಿನ ಚೀಟಿ, ಚಾಲನ ಪರವಾನಿಗೆ/ ಆಧಾರ್/ ಪಾಸ್ ಪೋರ್ಚ್/ ಬ್ಯಾಂಕ್ ಪಾಸ್ ಬುಕ್ ಇತ್ಯಾದಿ) ಸಲ್ಲಿಸಬೇಕು.

ಫಲಾನುಭವಿಯು ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಮದ್ಯಪಾನ ಅಥವಾ ಡ್ರಗ್ಸ್ನ ಅಮಲಿನಲ್ಲಿದ್ದರೆ, ಆತ್ಮಹತ್ಯೆ ಮಾಡಿಕೊಂಡರೆ, ಅಪರಾಧದ ಉದ್ದೇಶದಿಂದ ಮಾಡಿದ ಯಾವುದಾದರೂ ಕಾನೂನು ಉಲ್ಲಂಘನೆಯ ಕಾರಣ ಅಫಘಾತ ಸಂಭವಿಸಿದ್ದಲ್ಲಿ ಅಥವಾ ಬುದ್ಧಿ ಭ್ರಮಣೆಯ ಕಾರಣ ಅಪಘಾತ ಸಂಭವಿಸಿದಲ್ಲಿ ಯೋಜನೆಯ ಪ್ರಯೋಜನೆ ಸಿಗಲಾರದು ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News