ಲೋಕಸಭೆ ಚುನಾವಣೆ | ನಗದು ಸೇರಿ 262 ಕೋಟಿ ರೂ. ಮೌಲ್ಯದ ವಿವಿಧ ವಸ್ತುಗಳು ಜಪ್ತಿ

Update: 2024-04-07 14:54 GMT

ಬೆಂಗಳೂರು : ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ವಿವಿಧ ತನಿಖಾ ತಂಡಗಳು ರಾಜ್ಯದಲ್ಲಿ ಈವರೆಗೆ 35 ಕೋಟಿ ರೂ.ನಗದು ಸೇರಿದಂತೆ 262 ಕೋಟಿ ರೂ. ಮೊತ್ತದ ವಿವಿಧ ವಸ್ತುಗಳನ್ನು ಜಪ್ತಿ ಮಾಡಿವೆ.

ಇದುವರೆಗೆ 133 ಕೋಟಿ ರೂ. ಮೌಲ್ಯದ 1.33 ಕೋಟಿ ಲೀಟರ್ ಮದ್ಯ, 5.48 ಕೋಟಿ ರೂ. ಮೌಲ್ಯದ 323 ಕೆಜಿ ಮಾದಕ ವಸ್ತು, 9.49 ಕೋಟಿ ರೂ. ಮೌಲ್ಯದ 16.10 ಕೆಜಿ ಚಿನ್ನ, 27 ಲಕ್ಷ ರೂ. ಮೌಲ್ಯದ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ.

ನಗದು, ಮದ್ಯ ಸೇರಿದಂತೆ ವಶಪಡಿಸಿಕೊಂಡ ವಿವಿಧ ವಸ್ತುಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ 1,337 ಎಫ್‍ಐಆರ್ ಗಳನ್ನು ದಾಖಲಿಸಲಾಗಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಗುಂಜೂರಪಾಳ್ಯದಲ್ಲಿ 10 ಲಕ್ಷ ರೂ. ಮೌಲ್ಯದ 5.5 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News