ಲೋಕಸಭಾ ಚುನಾವಣೆಗೂ ನನ್ನ ದೆಹಲಿ ಭೇಟಿಗೂ ಸಂಬಂಧವಿಲ್ಲ: ಜಗದೀಶ್‌ ಶೆಟ್ಟರ್

Update: 2023-12-22 10:26 GMT

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೂ ನನ್ನ ದೆಹಲಿ ಭೇಟಿಗೂ ಸಂಬಂಧವಿಲ್ಲ. ವೈಯಕ್ತಿಕ ಕೆಲಸಗಳಿಗಾಗಿ ನಾನು ದೆಹಲಿಗೆ ಹೋಗಿದ್ದೆ. ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿ ಆಗಿಲ್ಲ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ನನಗಿಂತ ಒಂದು ದಿನ ಮುಂಚೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದರು. ಅದಾದ ನಂತರ ನಾನು ಹೋಗಿದ್ದೆ. ಅವರು ಪ್ರಧಾನಿಗಳನ್ನು ಭೇಟಿಯಾಗಲು ಹೋಗಿದ್ದರು. ನಾನು ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ. ಈ ವೇಳೆ ಯಾವುದೇ ನಾಯಕರನ್ನು ಭೇಟಿಯಾಗಿಲ್ಲ. ಯಾವುದೇ ಚುನಾವಣೆಯ ವಿಚಾರವನ್ನು ಚರ್ಚಿಸಿಲ್ಲ ಎಂದು ತಿಳಿಸಿದರು.

ಧಾರವಾಡ ಆಕಾಂಕ್ಷಿಯಾಗಿ ಜಗದೀಶ್  ಶೆಟ್ಟರ್ ಹೆಸರು ಶಿಫಾರಸ್ಸು ಮಾಡಲಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇನ್ನೂ ಯಾರ ಹೆಸರನ್ನು ಕಳುಹಿಸಿಲ್ಲ. ಅದು ಹೇಗೆ ನನ್ನದೇ ಒಂದು ಹೆಸರು ಕಳಿಸಿದ್ದಾರೆ ಅಂತ ಹೇಳ್ತೀರಿ? ನಿಮಗೆ ಆ ಪಟ್ಟಿ ಕೊಟ್ಟವರು ಯಾರು? ಎಂದು ಪ್ರಶ್ನಿಸಿದರು.

ಮೊನ್ನೆಯಷ್ಟೇ ವೀಕ್ಷಕರ ಸಭೆಯಾಗಿದೆ. ಟಿಕೆಟ್ ಆಕಾಂಕ್ಷಿಗಳ ಶಾರ್ಟ್ ಲಿಸ್ಟ್ ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಇಷ್ಟರ ನಡುವೆಯೇ ನನ್ನದೊಂದೇ ಹೆಸರು ಕಳಿಸಿದ್ದಾರೆ ಅಂತ ಹೇಳ್ತಿದ್ದೀರಿ. ಸಿಎಂ ಸಮ್ಮುಖದಲ್ಲಿಯೇ ನಾನು ಚುನಾವಣೆಗೆ ನಿಲ್ಲಲ್ಲ ಅಂತ ಹೇಳಿದ್ದೇನೆ. ಕಾಂಗ್ರೆಸ್ ನಿಂದ ಯಾರನ್ನೇ ನಿಲ್ಲಿಸಿದರೂ ಗೆಲ್ಲಿಸಲು ಶ್ರಮಿಸುತ್ತೇನೆ ಎಂದರು.




 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News