ಲೋಕಸಭಾ ಚುನಾವಣೆ | ಕರ್ನಾಟಕ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ : ಯಾರ‍್ಯಾರಿಗೆ ಸ್ಥಾನ?

Update: 2024-03-30 07:10 GMT

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಸೇರಿದಂತೆ ಕೇಂದ್ರ ಸಚಿವರು, ಕರ್ನಾಟಕದ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಅಲ್ಲದೇ, ಈ ಬಾರಿಯ ಲೋಕಸಭಾ ಟಿಕೆಟ್ ವಂಚಿತರಾದ ನಾಯಕರ ಹೆಸರುಗಳೂ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದೆ.

ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಇಂತಿದೆ

ನರೇಂದ್ರ ಮೋದಿ, ಜೆ.ಪಿ ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಎಸ್.ಜೈಶಂಕರ್, ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಆರ್.ಅಶೋಕ್, ಕೆ.ಅಣ್ಣಾಮಲೈ, ರಾಧಾಮೋಹನ ದಾಸ್ ಅಗರ್ವಾಲ್, ಯೋಗಿ ಆದಿತ್ಯನಾಥ್, ಹಿಮಂತ್ ಬಿಸ್ವಾ ಶರ್ಮಾ, ಪ್ರಮೋದ್ ಸಾವಂತ್, ದೇವೇಂದ್ರ ಫಡ್ನವಿಸ್, ಬಸವರಾಜ ಬೊಮ್ಮಾಯಿ, ಸುಧಾಕರ ರೆಡ್ಡಿ, ಸದಾನಂದಗೌಡ, ಜಗದೀಶ್ ಶೆಟ್ಟರ್, ನಳಿನ್ ಕುಮಾರ್ ಕಟೀಲ್, ಸಿ.ಟಿ.ರವಿ, ಗೋವಿಂದ ಕಾರಜೋಳ, ಅಶ್ವತ್ಥ್ ನಾರಾಯಣ, ಬಿ.ಶ್ರೀರಾಮುಲು, ಅರವಿಂದ ಲಿಂಬಾವಳಿ, ವಿ.ಸುನೀಲ್ ಕುಮಾರ್, ಜಿ.ವಿ.ರಾಜೇಶ್, ಪಿ.ರಾಜೀವ್, ಪ್ರೀತಂಗೌಡ, ಬಸನಗೌಡ ಪಾಟೀಲ್ ಯತ್ನಾಳ್, ಭೈರತಿ ಬಸವರಾಜ್, ಪ್ರಮೋದ್ ಮಧ್ವರಾಜ್, ಪ್ರತಾಪ್ ಸಿಂಹ, ಛಲವಾದಿ ನಾರಾಯಣಸ್ವಾಮಿ, ಎನ್.ಮಹೇಶ್​ಗೆ ಸ್ಟಾರ್​ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News