ಲೋಕಸಭಾ ಚುನಾವಣಾ ಫಲಿತಾಂಶ | ಕರ್ನಾಟಕದಲ್ಲಿ ಚೇತರಿಸಿಕೊಂಡ ಕಾಂಗ್ರೆಸ್

Update: 2024-06-04 06:17 GMT

ಬೆಂಗಳೂರು : ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ರಾಜ್ಯದಲ್ಲಿ ಕಾಂಗ್ರೆಸ್‌ 10, ಬಿಜೆಪಿ 16, ಜೆಡಿಎಸ್‌ 2 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಭಾರಿ ಕಾಂಗ್ರೆಸ್‌ 28 ಕ್ಷೇತ್ರದಲ್ಲಿ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿತ್ತು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಎಂ.ಲಕ್ಷ್ಮಣ್ ಅವರಿಗಿಂತ 74150 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಕೋಲಾರ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಗತಿಯಲ್ಲಿದ್ದು, ಬಿಜೆಪಿ ಬೆಂಬಲಿತ ಜಾತ್ಯಾತೀತ ಜನತಾದಳದ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಮುನ್ನಡೆಯಲ್ಲಿದ್ದಾರೆ.

12ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ 421522 ಮತಗಳನ್ನು ಪಡೆದಿದ್ದು, ಬಿಜೆಪಿ ಬೆಂಬಲಿತ ಜಾತ್ಯಾತೀತ ಜನತಾದಳದ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು 443260 ಮತಗಳನ್ನು ಪಡೆದಿದ್ದಾರೆ . 21738 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹಾಲಿ ಸಂಸದ ಡಿ.ಕೆ.ಸುರೇಶ್ ಗೆ ಭಾರೀ ಹಿನ್ನಡೆ ಅನುಭವಿಸಿದ್ದು, ಮಂಜುನಾಥ್ 1,15,945 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕೊಪ್ಪಳ ಲೋಕಾ ಕ್ಷೆತ್ರದ ಕಾಂಗ್ರೆಸ್ ಪಕ್ಷದ ರಾಜಶೇಖರ ಹಿಟ್ನಾಳಗೆ 359234 ಮತಗಳು ಬಂದಿದ್ದು ಮುನ್ನೆಡೆ ಸಾಧಿಸಿದ್ದಾರೆ

ಬಿಜೆಪಿ ಪಕ್ಷದ ಬಸವರಾಜ ಕ್ಯಾವಟರ್ ಗೆ 354081 ಪಡೆದು ಹಿನ್ನೆಡೆ ಅನುಭವಿಸಿದ್ದಾರೆ. ರಾಜಶೇಖರ ಹಿಟ್ನಾಳ ಅವರು 5153 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯ, ಬೆಂಗಳೂರು ಕೇಂದ್ರದಲ್ಲಿ ಮನ್ಸೂರ್‌ ಖಾನ್‌, ಮಂಡ್ಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ, ಧಾರವಾಡದಲ್ಲಿ ಪ್ರಹ್ಲಾದ್‌ ಜೋಶಿ ಮುನ್ನಡೆಯಲ್ಲಿ ಇದ್ದಾರೆ.

ಇನ್ನು ಹಲವು ಸುತ್ತುಗಳ ಮತ ಎಣಿಕೆ ನಡೆಯಲಿದ್ದು, ಪೂರ್ಣಗೊಂಡ ನಂತರವಷ್ಟೇ ಗೆಲುವುವಯಾರಿಗೆ ಎಂಬ ಸ್ಪಷ್ಟ ಚಿತ್ರಣ ಹೊರಬರಲಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News