ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಮಂಗಳವಾರ ದಿಲ್ಲಿಯಲ್ಲಿ ಸಭೆ

Update: 2024-03-18 18:25 GMT

ಬೆಂಗಳೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಳಗ್ಗೆ 10 ಗಂಟೆಗೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಅವರೊಂದಿಗೆ, ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕೆಲವು ಸಚಿವರು ತೆರಳುವ ಸಾಧ್ಯತೆಯಿದೆ. ಕಾಂಗ್ರೆಸ್ ಹೈಕಮಾಂಡ್ ಈಗಾಗಲೆ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ತುಮಕೂರು, ಹಾಸನ, ಹಾವೇರಿ ಹಾಗೂ ಬಿಜಾಪುರ ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟ ಮಾಡಿದೆ.

ನಾಳೆ(ಮಂಗಳವಾರ) ನಡೆಯಲಿರುವ ಸಭೆಯಲ್ಲಿ ಬಹುತೇಕ ಉಳಿದ 21 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ. ಅಲ್ಲದೇ, ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಹಾಲಿ ಸಂಸದರು ಹಾಗೂ ಮಾಜಿ ಸಚಿವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ವಿಚಾರದ ಬಗ್ಗೆಯೂ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಬಹುದು ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News