ರಾಜ್ಯದ ಹಲವೆಡೆ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Update: 2023-06-28 04:13 GMT

ಬೆಂಗಳೂರು: ರಾಜ್ಯದಾದ್ಯಂತ ಇಂದು (ಜೂನ್ 28) ಬೆಳ್ಳಂಬೆಳಗ್ಗೆ ಸರಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿಯಾಗಿದೆ. 

ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ಮಾಡಿದ್ದು, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. 

ಚಿಕ್ಕಮಗಳೂರು ನಗರದ ಜಯನಗರ ಬಡಾವಣೆಯಲ್ಲಿರುವ ಸರಕಾರಿ ಅಧಿಕಾರಿ ಗಂಗಾಧರ್ ಅವರ ಮನೆ ಹಾಗೂ ಅವರು ಕೆಲಸ ನಿರ್ವಹಿಸುತ್ತಿರುವ ನಿರ್ಮಿತಿ ಕೇಂದ್ರದ ಕಚೇರಿ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ಏಕಕಾಲದಲ್ಲಿ 50ಕ್ಕೂ ಹೆಚ್ಚು ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. 

ಇನ್ನು ಬೆಂಗಳೂರು, ರಾಮನಗರ, ಬಾಗಲಕೋಟೆ, ಬೆಳಗಾವಿ, ತುಮಕೂರು, ಕಲಬುರಗಿ, ಯಾದಗಿರಿ, ಕೋಲಾರ ಸೇರಿದಂತೆ ಇನ್ನು ಇತರೆ ಜಿಲ್ಲೆಗಳಲ್ಲೂ ಲೋಕಾಯುಕ್ತ ದಾಳಿಯಾಗಿದೆ.

ಬೆಂಗಳೂರು: ಕೆ.ಆರ್.ಪುರ ತಹಶೀಲ್ದಾರ್ ಹುದ್ದೆಯಲ್ಲಿದ್ದ ಕೆಎಎಸ್ ಅಧಿಕಾರಿ ಅಜಿತ್ ಕುಮಾರ್ ರೈ ಮನೆ ಮತ್ತು ಅವರ ನಿಕಟವರ್ತಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ‌ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು, ಶೋಧ ನಡೆಸುತ್ತಿದ್ದಾರೆ.

ಲೋಕಾಯುಕ್ತ SP ಅಶೋಕ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಅಜಿತ್ ಕುಮಾರ್ ಅವರ ಮನೆಯಲ್ಲಿ ಬೃಹತ್ ಪ್ರಮಾಣದ ನಗದು ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. 


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News