ಸಣ್ಣ ನೀರಾವರಿ ಇಲಾಖೆ-ಬಿಬಿಎಂಪಿ ಇಂಜಿನಿಯರ್ ದಂಪತಿ ಮನೆ ಮೇಲೆ ಲೋಕಾಯುಕ್ತ ದಾಳಿ; 1 ಕೆಜಿಗೂ ಅಧಿಕ ಚಿನ್ನಾಭರಣ, 15 ಲಕ್ಷ ನಗದು ಪತ್ತೆ
Update: 2023-08-17 12:53 GMT
ದಾವಣಗೆರೆ: ಇಲ್ಲಿನ ಜಯನಗರದಲ್ಲಿರುವ ಚಿತ್ರದುರ್ಗ ತಾಲೂಕಿನ ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಬಿಬಿಎಂಪಿ ಎಇಇ ಎಚ್.ಭಾರತಿ ಅವರ ನಿವಾಸದ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪತ್ನಿ ಎಚ್. ಭಾರತಿ ದಾವಣಗೆರೆ ಮಹಾನಗರ ಪಾಲಿಕೆಯ ಇಂಜಿನಿಯರ್ ಆಗಿ ಕೆಲಸ ಮಾಡಿದ್ದರು ಸದ್ಯ ಬಿಬಿಎಂಪಿ ಎಇಇ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಲೋಕಾಯುಕ್ತರ ದಾಳಿ, ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಈವರೆಗೆ 1 ಕೆಜಿಗೂ ಅಧಿಕ ಚಿನ್ನಾಭರಣ, 15ಲಕ್ಷ ನಗದು ಪತ್ತೆಯಾಗಿದೆ ಎಂದು ವರದಿಯಾಗಿದೆ.