‘ಮಕ್ಕಳಿಂದ ಶೌಚಾಲಯ ಶುಚಿ’ ಮಾಡಿಸಿದರೆ ಕಠಿಣ ಕ್ರಮ: ಮಧು ಬಂಗಾರಪ್ಪ
Update: 2025-03-29 19:05 IST
ಮಧು ಬಂಗಾರಪ್ಪ
ಬೆಂಗಳೂರು : ಸರಕಾರಿ ಶಾಲೆಗಳಲ್ಲಿ ಮಕ್ಕಳಿಂದ ಕಸ ಗುಡಿಸುವ ಮತ್ತು ಶೌಚಾಲಯಗಳನ್ನು ಶುಚಿಗೊಳಿಸುವ ಪ್ರಕರಣಗಳು ವರದಿಯಾದರೆ ಕೂಡಲೇ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಮಕ್ಕಳಿಂದ ಶಾಲಾ ಆವರಣ ಮತ್ತು ಶೌಚಾಲಯ ಶುಚಿಮಾಡಿಸುವ ಪ್ರಕರಣ ನಡೆಯುತ್ತಿಲ್ಲ. ಒಂದು ವೇಳೆ ಅಂತಹ ಘಟನೆ ನಡೆದರೆ ಸಂಬಂಧಪಟ್ಟವರ ವಿರುದ್ಧ ಕೂಡಲೇ ಕ್ರಮ ಜರುಗಿಸಲಾಗುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲೆಗಳ ನಿರ್ವಹಣೆಗಾಗಿ ನೀಡುತ್ತಿದ್ದ ಹಣದ ಮೊತ್ತವನ್ನು ದ್ವಿಗುಣಗೊಳಿಸಿದ್ದಾರೆ. ಅಲ್ಲದೆ, ಮಕ್ಕಳಿಂದ ಶುಚಿಗೊಳಿಸುವ ಪ್ರಕರಣ ಗಮನಕ್ಕೆ ಬಂದರೆ ಮರುಕ್ಷಣವೇ ಕಾನೂನು ಕ್ರಮ ಜರುಗಿಸಲಾಗುವುದು ಮತ್ತು ಅದನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿಯನ್ನು ಶಾಲಾ ಸುಧಾರಣಾ ಸಮಿತಿಗಳಿಗೆ ವಹಿಸಲಾಗಿದೆ ಎಂದು ಮಧು ಬಂಗಾರಪ್ಪ ಹೇಳಿದರು.