ಮೆಟ್ರೋದಲ್ಲಿ ಬೀಡಿ ಸೇದಿದ ಪ್ರಯಾಣಿಕ: ವೀಡಿಯೊ ವೈರಲ್‌

Update: 2023-09-26 05:57 GMT

ಹೊಸದಿಲ್ಲಿ: ಮೆಟ್ರೋ ರೈಲಿನಲ್ಲಿ ಪ್ರಯಾಣಿಕನೊಬ್ಬ ಬೀಡಿ ಸೇದುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಮೆಟ್ರೋ ಆವರಣದೊಳಗೆ ಧೂಮಪಾನವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದು, ಶಿಕ್ಷಾರ್ಹ ಅಪರಾಧವೂ ಹೌದು. ಅದಾಗ್ಯೂ, ದಿಲ್ಲಿಯ ಮೆಟ್ರೋ ರೈಲಿನಲ್ಲಿ ವ್ಯಕ್ತಿಯೊಬ್ಬರು ಆರಾಮವಾಗಿ ಕೂತು ಬೀಡಿ ಸೇದುತ್ತಿರುವುದು ಕಂಡು ಬಂದಿದೆ.

ಈ ವಿಡಿಯೋವನ್ನು ನೆಟ್ಟಿಗರು ಹಂಚಿಕೊಂಡಿದ್ದು, ಬೀಡಿ ಸೇದಿದ ವ್ಯಕ್ತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ (ಡಿಎಂಆರ್‌ಸಿ) ಗೆ ಕೇಳಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News