ಮಂಡ್ಯ | ಬುದ್ದಿವಾದ ಹೇಳಿದ್ದಕ್ಕೆ ವಿದ್ಯಾರ್ಥಿಯಿಂದ ಮಾರಕಾಸ್ತ್ರ ಹಿಡಿದು ಶಿಕ್ಷಕನಿಗೆ ಬೆದರಿಕೆ‌: ವೀಡಿಯೊ ವೈರಲ್‌

Update: 2023-08-25 07:15 GMT

ಮಂಡ್ಯ: ಬುದ್ದಿವಾದ ಹೇಳಿದ್ದಕ್ಕೆ ವಿದ್ಯಾರ್ಥಿಯೊಬ್ಬ ಶಿಕ್ಷಕರ ಎದುರು ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿರುವ ಪ್ರಕರಣ ನಾಗಮಂಗಲದಲ್ಲಿ ವರದಿಯಾಗಿದೆ.

ಈ ಕುರಿತು ವೀಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. 

ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೋಮಾ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ತರಗತಿಗೆ ಸರಿಯಾಗಿ ಹಾಜರಾಗುತ್ತಿರಲಿಲ್ಲ ಎಂದು ಉಪನ್ಯಾಸಕರೊಬ್ಬರು ತಿಳುವಳಿಕೆ ಹೇಳುವಂತೆ ಪೋಷಕರಿಗೆ ಮಾಹಿತಿ ನೀಡಿದ್ದಾರೆನ್ನಲಾಗಿದೆ.ಅಷ್ಟಕ್ಕೆ ಕೋಪಗೊಂಡ ವಿದ್ಯಾರ್ಥಿ ಮಾರಕಾಸ್ತ್ರ ಹಿಡಿದು ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಹಾಕುತ್ತಿರುವ ವೀಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. 

ಆರೋಪಿ ಪೋಲಿಸ್ ವಶಕ್ಕೆ

ಘಟನೆ ಮಾಹಿತಿ ತಿಳಿದ ತಕ್ಷಣವೇ ಕಾಲೇಜಿಗೆ ಬಂದ ಬೆಳ್ಳೂರು ಠಾಣೆ ಪೊಲೀಸರು ವಿದ್ಯಾರ್ಥಿ ತಂದಿದ್ದ ಮಾರಕಾಸ್ತ್ರ ಹಾಗೂ ಆತನ ಬೈಕ್ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಆನಂತರ ಪೋಷಕರು ಮತ್ತು ಉಪನ್ಯಾಸಕರ ಸಮ್ಮುಖದಲ್ಲಿ ಬುದ್ದಿವಾದ ಹೇಳಿದ್ದು ಮತ್ತೆ ಇನ್ನೆಂದು ಈ ತರ ತಪ್ಪು ಮಾಡಲ್ಲ ಎಂದು ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಪ್ರಕರಣಕ್ಕೆ ಅಂತ್ಯವಾಡಿದರು ಎಂದು ತಿಳಿದುಬಂದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News