ಮಂಡ್ಯ ಕ್ಷೇತ್ರ ಜೆಡಿಎಸ್‍ಗೇಕೆ ಬಿಟ್ಟು ಕೊಡಬೇಕು: ನಾರಾಯಣಗೌಡ ಪ್ರಶ್ನೆ

Update: 2024-01-25 16:03 GMT

ಬೆಂಗಳೂರು: ಹಾಲಿ ಸಂಸದೆ ಆಗಿರುವ ಸುಮಲತಾ ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಸ್ಪರ್ಧಿಸಬೇಕಾಗಿದೆ. ಆದರೆ, ಜೆಡಿಎಸ್ ನಾಯಕರಿಗೆ ಯಾಕೆ ಬಿಟ್ಟು ಕೊಡಬೇಕು ಎಂದು ಮಾಜಿ ಸಚಿವ ಕೆ.ಸಿ. ನಾರಾಯಣಗೌಡ ಪ್ರಶ್ನಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಲತಾ ಈಗಾಗಲೇ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಮಂಡ್ಯ ಕ್ಷೇತ್ರವನ್ನು ಏಕೆ ಜೆಡಿಎಸ್‍ನವರಿಗೆ ಕೊಡಬೇಕು. ಜಿಲ್ಲೆಯಲ್ಲಿ ಬಿಜೆಪಿ ಚಿಗುರುತ್ತಿದೆ, ನಾನು ಶಾಸಕ ಆಗಿದ್ದವನು. ಹೈಕಮಾಂಡ್ ಸುಮಲತಾ ಸ್ಪರ್ಧೆಗೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News