ಮಂಡ್ಯ | ನಗ್ನ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರಗೈದು ಕೊಲೆ ಶಂಕೆ
Update: 2024-01-14 06:33 GMT
ಮಂಡ್ಯ, ಜ.14: ನಾಗಮಂಗಲ ತಾಲೂಕಿನ ಬೆಳ್ಳೂರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಅತ್ಯಾಚಾರಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬರುವ ಹರ್ಷ ಗ್ರ್ಯಾಂಡ್ ಹೋಟೆಲ್ ಮುಂದಿನ ಕಾಡು ಪ್ರದೇಶದಂತಿರುವ ನಿರ್ಜನ ಪ್ರದೇಶದಲ್ಲಿ ಮಹಿಳೆಯ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೊಲೆಯಾದವರನ್ನು ತಿರುಮಲಾಪುರ ಗ್ರಾಮದ ಮುರುಗಮ್ಮ (31) ಎಂದು ಗುರುತಿಸಲಾಗಿದೆ. ಒಂದಿಷ್ಟು ಬುದ್ಧಿಮಾಂದ್ಯಯಾಗಿದ್ದ ಇವರು ಅವಿವಾಹಿತೆಯಾಗಿದ್ದರು ಎಂದು ತಿಳಿದುಬಂದಿದೆ.
ಮುರುಗಮ್ಮ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದರೆನ್ನಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳೂರು ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.