ಮಂಡ್ಯ | ವಿದ್ಯುತ್ ತಂತಿ ತುಳಿದು ಮಹಿಳೆ ಮೃತ್ಯು
Update: 2024-05-25 12:30 GMT
ಮಂಡ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಲಕ್ಷ್ಮೀಪುರ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿರುವುದಾಗಿ ವರದಿಯಾಗಿದೆ.
ಬೆಳಗ್ಗೆ ತಮ್ಮ ಜಮೀನಿಗೆ ತೆರಳಿದ್ದ ಗಾಯಿತ್ರಮ್ಮ(45) ಅಚಾನಕ್ಕಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕಿಕ್ಕೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರೇವತಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.