ಮನ್ ಕೀ ಬಾತ್ ನಲ್ಲಿ ಕಳೆದುಹೋದ ಮಣಿಪುರದ ಬಾತ್: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

Update: 2023-07-01 14:12 GMT

ಬೆಂಗಳೂರು: ಈಶಾನ್ಯ ಭಾರತದ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಹುಭಾಷಾ ನಟ ಕಿಶೋರ್ ಕಿಡಿ ಕಾರಿದ್ದಾರೆ. 

ಈ ಸಂಬಂಧ ಸಾಮಾಜಿ ಕಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ''ದೇಶದಲ್ಲಿ ಎಲ್ಲೇ ಅಶಾಂತಿ ಮೂಡಿದಾಗಲೂ ಒಬ್ಬ ಪ್ರಧಾನಿ ಮಾಡಬಹುದಾದ ಮೂಲಭೂತ, ಅತೀ ಸರಳ, ಕಾಮನ್ ಸೆನ್ಸ್ ನ ಕೆಲಸ ಶಾಂತಿಯ ಕರೆ ಕೊಡುವುದು. ಅದನ್ನೂ ಕೂಡ ಮಾಡದ ಪ್ರಧಾನಿಯ ಮನಸ್ಥಿತಿಯೇನು?'' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

''ನೂರ ನಲವತ್ತು ಕೋಟಿ ಓಟಿನ ದೇಶದಲ್ಲಿ ಕೇವಲ 2 ಲೋಕಸಭೆ ಸೀಟಿನ ಮಣಿಪುರದ ಸತ್ತುಹೋದ ನೂರು ಓಟು, ಮನೆ ಕಳೆದುಕೊಂಡ 50 ಸಾವಿರ ಓಟುಗಳು, ಈ ಪ್ರಚಾರದಾಹಿ ಅಧಿಕಾರದಾಹಿ ಪ್ರಧಾನಿಗೆ ಯಾವ ಲೆಕ್ಕವೆಂಬುದೇ? 2002 ರಲ್ಲಿ ಗುಜರಾತ್ 2023 ರಲ್ಲಿ ಮಣಿಪುರ .. ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ…ಇತಿಹಾಸಕ್ಕೆ ಮರೆವಿಲ್ಲ ನೆನಪಿರಲಿ'' ಎಂದು ಕಿಶೋರ್ ಬರೆದುಕೊಂಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News