ವಿಧಾನ ಪರಿಷತ್‌ ಗೆ ನಾಮ ನಿರ್ದೇಶನ: ಮನ್ಸೂರ್ ಹೆಸರು ಕೈಬಿಟ್ಟ ಸರಕಾರ, ಉಮಾಶ್ರೀಗೆ ಮಣೆ

Update: 2023-08-15 14:58 GMT

 ಉಮಾಶ್ರೀ - ಮನ್ಸೂರ್ ಅಲಿ ಖಾನ್

ಬೆಂಗಳೂರು, ಆ.15: ಕಾಂಗ್ರೆಸ್ ನಾಯಕ ಮನ್ಸೂರ್ ಅಲಿ ಖಾನ್ ಅವರ ಹೆಸರನ್ನು ಅಂತಿಮ ಪಟ್ಟಿಯಲ್ಲಿ ಕೈಬಿಟ್ಟಿರುವ ರಾಜ್ಯ ಸರಕಾರ, ಇವರ ಬದಲಿಗೆ ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಹೆಸರನ್ನು ಸೇರ್ಪಡೆಗೊಳಿಸಿ ರಾಜ್ಯಪಾಲರಿಗೆ ಪಟ್ಟಿ ರವಾನಿಸಿದೆ ಎಂದು ವರದಿಯಾಗಿದೆ.

ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಟಿ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹಾಗೂ ನಿವೃತ್ತ ಈಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನೂ ಅಂತಿಮಗೊಳಿಸಿ ಪಟ್ಟಿಯನ್ನು ಕಳುಹಿಸಿದ್ದಾರೆ.

ಕಲಾವಿದರ ಕೋಟಾದಡಿ ಉಮಾಶ್ರೀ ಅವರಿಗೆ ಸ್ಥಾನ ನೀಡಿದರೆ, ಶಿಕ್ಷಣ ಕ್ಷೇತ್ರದ ಕೋಟಾದಡಿ ಎಂ.ಆರ್.ಸೀತಾರಾಮ್ ಹಾಗೂ ಸಮಾಜ ಸೇವೆ ಹೆಸರಲ್ಲಿ ಸುಧಾಮ್ ದಾಸ್ ಅವರಿಗೆ ನಾಮನಿರ್ದೇಶನ ಮಾಡುವಂತೆ ಕೋರಿ ಶಿಫಾರಸ್ಸು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇನ್ನೂ, ಎಂ.ಆರ್.ಸೀತಾರಾಮ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿರುವ ಹಿನ್ನೆಲೆ ರಾಜ್ಯಪಾಲರು ಸೀತಾರಾಮ್ ಕುರಿತು ಹೆಚ್ಚಿನ ಮಾಹಿತಿ ನೀಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆ ನಾಳೆ(ಬುಧವಾರ) ಮುಖ್ಯ ಕಾರ್ಯದರ್ಶಿ ರಾಜ್ಯಪಾಲರನ್ನು ಭೇಟಿಯಾಗಿ ವಿವರಣೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News