ಗಂಗಾವತಿ ರೈಲು ನಿಲ್ದಾಣಕ್ಕೆ ‘ಅಂಜನಾದ್ರಿ ಹೆಸರಿಡಲು ಶಿಫಾರಸು’ : ಎಂ.ಬಿ.ಪಾಟೀಲ್

Update: 2024-11-24 15:43 GMT

ಎಂ.ಬಿ.ಪಾಟೀಲ್

ಬೆಂಗಳೂರು : ಕೊಪ್ಪಳ ಜಿಲ್ಲೆಯ ಗಂಗಾವತಿ, ಮುನಿರಾಬಾದ್ ಮತ್ತು ಬಾನಾಪುರ ರೈಲ್ವೆ ನಿಲ್ದಾಣಗಳಿಗೆ ಕ್ರಮವಾಗಿ ಅಂಜನಾದ್ರಿ, ಹುಲಿಗೆಮ್ಮ ದೇವಿ ಮತ್ತು ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ರವಿವಾರ ಈ ಬಗ್ಗೆ ಪ್ರಕಟನೆ ನೀಡಿರುವ ಅವರು, ಈ ಶಿಫಾರಸ್ಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಿಸಲಾಗಿದೆ. ಅವರ ಮೂಲಕ ಇದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿ ಕೊಡಲಾಗುವುದು ಎಂದಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ಈ ಮೂರು ನಿಲ್ದಾಣಗಳಿಗೆ ಮರುನಾಮಕರಣ ಮಾಡುವುದರ ಹಿಂದೆ ಜನರ ಭಾವನೆಗಳಿಗೆ ಮನ್ನಣೆ ನೀಡಿದಂತೆ ಆಗುತ್ತದೆ. ಅಂಜನಾದ್ರಿಯು ರಾಮಾಯಣದಲ್ಲಿ ಬರುವ ಆಂಜನೇಯನ ಜನ್ಮಸ್ಥಳವಾಗಿದ್ದು, ಹುಲಿಗೆಮ್ಮದೇವಿ ಈ ಭಾಗದ ಜನಪ್ರಿಯ ಜನಪದ ದೇವತೆಯಾಗಿದೆ. ಮಹಾತ್ಮ ಗಾಂಧಿ ಅವರ ಹೆಸರಿಡುವುದರ ಹಿಂದೆ ಐತಿಹಾಸಿಕ ಕಾರಣವಿದೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News