ವೈದ್ಯಕೀಯ ಪದವಿ ಸೀಟು ಹಂಚಿಕೆ: ‘ಕೆಇಎ’ಗೆ ಹೈಕೋರ್ಟ್‍ನಿಂದ 5 ಲಕ್ಷ ರೂ.ದಂಡ

Update: 2024-01-21 14:41 GMT

ಬೆಂಗಳೂರು: ರೇಡಿಯೊ ಡಯೋಗ್ನಾಸಿಸ್ ವೈದ್ಯಕೀಯ ಸ್ನಾತಕೋತ್ತರ ಪದವಿಯ ಸೀಟನ್ನು ಬ್ಲಾಕ್ ಮಾಡುವ ಮೂಲಕ ಕಾನೂನು ಬಾಹಿರವಾಗಿ ಸೀಟು ಹಂಚಿಕೆ ಮಾಡಿದ ಆರೋಪದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ(ಕೆಇಎ) ಹೈಕೋರ್ಟ್ 5 ಲಕ್ಷ ರೂ.ದಂಡ ವಿಧಿಸಿ ಆದೇಶಿಸಿದೆ.

ಈ ಸಂಬಂಧ ಸೀಟು ವಂಚಿತರಾದ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಡಾ.ಸಿ.ಕೆ.ರಜನಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ.

‘ಅರ್ಜಿದಾರರಿಗೆ ರೇಡಿಯೊ ಡಯೋಗ್ನಾಸಿಸ್ ಸೀಟನ್ನು ಮರು ಹಂಚಿಕೆ ಮಾಡಬೇಕು’ ಎಂದೂ ನಿರ್ದೇಶಿಸಿದೆ. ‘ದಂಡದ ಮೊತ್ತದಲ್ಲಿ 2.5 ಲಕ್ಷ ರೂ. ಮೊತ್ತವನ್ನು ಡಾ.ಸಿ.ಕೆ.ರಜನಿ ಅವರಿಗೆ ಪಾವತಿಸಬೇಕು. ಉಳಿದ 2.5 ಲಕ್ಷ ರೂ. ಮೊತ್ತವನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಹೆಸರಿನಲ್ಲಿ ಠೇವಣಿ ಇರಿಸಬೇಕು’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

‘ವೈದ್ಯಕೀಯ ಸ್ನಾತಕೋತ್ತರ ವಿಭಾಗದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರಕ್ಕೆ ಅರ್ಜಿದಾರರು ಪಾವತಿಸಿರುವ ಶುಲ್ಕವನ್ನು ಕಲಬುರಗಿಯ ಎಂ.ಆರ್.ವೈದ್ಯಕೀಯ ಕಾಲೇಜಿನ ರೇಡಿಯೊ ಡಯೋಗ್ನಾಸಿಸ್ ಸೀಟಿಗೆ ಸರಿ ಹೊಂದಿಸಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿದೆ.

‘2023ರ ಸೆಪ್ಟೆಂಬರ್ 19ರಲ್ಲಿ ನಡೆದ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ನನಗೆ ಅನ್ಯಾಯವಾಗಿದೆ’ ಎಂದು ಆಕ್ಷೇಪಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News